ಫಿರೋಜಾಬಾದ್:ಆಘಾತಕಾರಿ ಘಟನೆಯೊಂದರಲ್ಲಿ ಆಟವಾಡುತ್ತಿದ್ದ ಬಾಲಕ ಹಠಾತ್ತನೆ ಕುಸಿದುಬಿದ್ದು ನಿಗೂಢವಾಗಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ.
ಬಾಲಕ ಕುಸಿದುಬಿದ್ದು ಮೃತಪಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೃತ ಬಾಲಕನನ್ನು ಫಿರೋಜಾಬಾದ್​ನ ಹುಹಿಮಯುನ್‌ಪುರದ ಚಂದ್ರಕಾಂತ್ (08)​ ಎಂದು ಗುರುತಿಸಲಾಗಿದೆ.
8 साल का चंद्रकांत स्कूल इंटरवल में खेलने निकला। अचानक जमीन पर गिरा और मौत हो गई।📍फिरोजाबाद, उत्तर प्रदेशpic.twitter.com/PkDz1sCw9h
ಇದನ್ನೂ ಓದಿ:ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್; ಪರೀಕ್ಷಾ ವರದಿ ಹೇಳಿದ್ದೇನು?
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಶನಿವಾರ ಮಧ್ಯಾಹ್ನ ಊಟದ ಸಮಯದಲ್ಲಿ ಈ ಘಟನೆ ನಡೆದಿದ್ದು, ವೈರಲ್​ ಆಗಿರುವ ವಿಡಿಯೋದಲ್ಲಿ ಬಾಲಕ ಓಡುತ್ತಿರುವುದನ್ನು ನೋಡಬಹುದಾಗಿದೆ. ಸ್ನೇಹಿತರೊಂದಿಗೆ ಬಾಲಕ ಆಟವಾಡುತ್ತಿದ್ದ ವೇಳೆ ಆತ ಅಚಾನಕ್​ ಆಗಿ ಕುಸಿದು ಬಿದಿದ್ದು, ಕೂಡಲೇ ಇದನ್ನು ಗಮನಿಸಿದ ಶಾಲಾ ಸಿಬ್ಬಂದಿ ಹಾಗೂ ಆತನ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದು ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಹಾರ್ಟ್​ ಅಟ್ಯಾಕ್​ ಆಗಿರುವ ಬಗ್ಗೆ ವೈದ್ಯರು ಸಂಶಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + one =
Remember me
