ಉತ್ತರಾಖಂಡ:ಶಾಲೆಗಳನ್ನು ಈಗ ಪುನಃ ಆರಂಭಿಸಬೇಕೇ ಬೇಡವೇ ಎಂಬ ಬಗ್ಗೆ ಕರ್ನಾಟಕದಲ್ಲಿ ಕೆಲವು ದಿನಗಳಿಂದ ವ್ಯಾಪಕ ಚರ್ಚೆ, ಜನ-ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹ, ಶಿಕ್ಷಣ ಸಂಸ್ಥೆಗಳ ಜತೆ ಮಾತುಕತೆ ಇತ್ಯಾದಿ ನಡೆಯುತ್ತಲೇ ಇದ್ದು ಇನ್ನೂ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ.
ಮತ್ತೊಂದೆಡೆ ಇನ್ನೊಂದು ರಾಜ್ಯದಲ್ಲಿ ಶಾಲೆಗಳನ್ನು ಮರು ಆರಂಭಿಸಿದ ಬೆನ್ನಿಗೇ ಶಿಕ್ಷಕರಲ್ಲಿ ಕರೊನಾ ಸೋಂಕು ಪತ್ತೆಯಾಗಿದ್ದು, ಶಾಲೆಗಳಿಗೆ ಮತ್ತೆ ಬೀಗ ಜಡಿಯಲಾಗಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಉತ್ತರಾಖಂಡದಲ್ಲಿ ನ. 2ರಿಂದ ಶಾಲೆಗಳನ್ನು ಮರು ಆರಂಭಿಸಲಾಗಿತ್ತು.
ರಾಜ್ಯದ ಎಲ್ಲ 13 ಜಿಲ್ಲೆಗಳ ಮ್ಯಾಜಿಸ್ಟ್ರೇಟ್ಸ್​, ಎಲ್ಲ ಶಿಕ್ಷಕರನ್ನು ಕೋವಿಡ್​-19 ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚಿಸಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಲ್ಲಿ ಕರೊನಾ ಟೆಸ್ಟ್ ನಡೆಸಲಾಗಿತ್ತು. ಈ ಪೈಕಿ ಪೌರಿ ಜಿಲ್ಲೆಯ ಖಿರ್ಸು, ಪೌರಿ, ಕಾಟ್​, ಪಾಬೊ, ಕಲ್ಜಿಖಲ್​ ಬ್ಲಾಕ್​ಗಳ 80 ಶಿಕ್ಷರಲ್ಲಿ ಗುರುವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು ಎಂಬುದಾಗಿ ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಹೀಗಾಗಿ ಪೌರಿ ಜಿಲ್ಲೆಯ ಗರ್ವಾಲ್​ ವಿಭಾಗದ ಐದು ಬ್ಲಾಕ್​ಗಳಲ್ಲಿ 84 ಶಾಲೆಗಳನ್ನು ಐದು ದಿನಗಳ ಮಟ್ಟಿಗೆ ಮುಚ್ಚಲಾಗಿದೆ. ಇಲ್ಲೀಗ ಉಳಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕರೊನಾ ಸೋಂಕಿನ ಆತಂಕ ಎದುರಾಗಿದೆ. ಇನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ಜನಜಂಗುಳಿಯಿಂದ ದೂರವಿದ್ದು, ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂಬುದಾಗಿ ಅಲ್ಲಿನ ಆರೋಗ್ಯ ಇಲಾಖೆ ಸೂಚನೆ ನೀಡಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
