ತೆಲಂಗಾಣ:ಏ.7ರ ನಂತರ ತೆಲಂಗಾಣ ಕರೊನಾ ವೈರಸ್​ ಮುಕ್ತವಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಈ ಹಿಂದೆ ಹೇಳಿದ್ದರು. ಆದರೆ ಅವರ ಲೆಕ್ಕಾಚಾರವನ್ನೆಲ್ಲ ಬುಡಮೇಲು ಮಾಡಿದ್ದು ತಬ್ಲಿಘಿ ಜಮಾತ್​ ಧಾರ್ಮಿಕ ಸಮಾವೇಶ.
ಸದ್ಯ ತೆಲಂಗಾಣದಲ್ಲಿ ಇರುವ ಕರೊನಾ ಸೋಂಕಿತರದಲ್ಲಿ ಶೇ.85ರಷ್ಟು ಮಂದಿ ದೆಹಲಿಯ ನಿಜಾಮುದ್ದೀನ್​ ಮರ್ಖಜ್​ನಲ್ಲಿ ನಡೆದಿದ್ದ ತಬ್ಲಿಘಿ ಜಮಾತ್​ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡವರು ಎಂದು ಅಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.
ತೆಲಂಗಾಣ ಆರೋಗ್ಯ ಸಚಿವ ಇಟಾಲ ರಾಜೇಂದ್ರ ಅವರು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ರೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿ, ತೆಲಂಗಾಣದಿಂದ ವರದಿಯಾದ ಕರೊನಾ ಸೋಂಕಿತರಲ್ಲಿ ಶೇ.85 ಮಂದಿ ದೆಹಲಿ ನಿಜಾಮುದ್ದೀನ್​ ಮರ್ಖಜ್​ನಿಂದ ಬಂದವರು ಎಂದು ಮಾಹಿತಿ ನೀಡಿದ್ದಾರೆ.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡರೆ ರಾಜ್ಯದಲ್ಲಿ ಕರೊನಾ ಇಳಿಮುಖವಾಗಲಿದೆ. ಸೋಂಕು ಪ್ರಸರಣವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ತೆಲಂಗಾಣದಲ್ಲಿ ಒಟ್ಟು 8500 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ 471 ಮಂದಿಯಲ್ಲಿ ಪಾಸಿಟಿವ್​ ವರದಿ ಬಂದಿದೆ. 12 ಮಂದಿ ಮೃತಪಟ್ಟಿದ್ದಾರೆ. ಹಾಗೇ 45 ಜನ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ ಎಂದು ಇಟಾಲ ರಾಜೇಂದ್ರ ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + twenty =
Remember me
