ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಗುಂಪಿನ ನಡುವೆ ಉಂಟಾಗಿರುವ ಗಲಾಟೆಯು ಹಿಂಸಾಚಾರಕ್ಕೆ ತಿರುಗಿರುವ ಪರಿಣಾಮ ಪೊಲೀಸ್​ ಸಿಬ್ಬಂದಿ ಸೇರಿ ಸಾವಿಗೀಡಾಗಿದವರ ಸಂಖ್ಯೆ 9ಕ್ಕೆ ಏರಿದೆ.
ಗಲಭೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅದರಲ್ಲೂ ಸುಮಾರು 70 ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪರ-ವಿರೋಧ ಬಣಗಳಿಂದ ದೆಹಲಿಯ ಹಲವು ಭಾಗಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹಲವೆಡೆ ಅಂಗಡಿಗಳು ಭಸ್ಮವಾಗಿದ್ದು, ಈಶಾನ್ಯ ದೆಹಲಿಯ ಭಜನ್​ಪುರ, ಚಾಂದ್​​ ಬಾಘ್​ ಮತ್ತು ಕರ್ವಾಲ್​ ನಗರಗಳಲ್ಲಿ ಜನರು ಕೈಯಲ್ಲಿ ಕೋಲು ಮತ್ತು ಕಬ್ಬಿಣದ ಸಲಾಕೆಗಳನ್ನು ಹಿಡಿದು ಬೀದಿಗೆ ಇಳಿದಿದ್ದಾರೆ.
ನಿನ್ನೆಯಷ್ಟೇ ಉಲ್ಬಣಗೊಂಡ ಹಿಂಸಾಚಾರಕ್ಕೆ ಈವರೆಗೂ 9 ಮಂದಿ ಬಲಿಯಾಗಿದ್ದು, ಸಾಕಷ್ಟು ಸೇನಾ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಿರುವುದಾಗಿ ಗೃಹ ಸಚಿವಾಲಯ ಮಾಹಿತಿ ನೀಡಿದೆ. ವದಂತಿಗಳನ್ನು ಹರಡುವುದನ್ನು ನಿಲ್ಲಿಸುವಂತೆ ಹಾಗೂ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡುವಂತೆ ಗೃಹ ಸಚಿವ ಅಮಿತ್​ ಷಾ ಅವರು ಸಿಎಂ ಅರವಿಂದ್​ ಕೇಜ್ರಿವಾಲ್​ ಜತೆ ನಡೆದ ಸಭೆಯ ಬಳಿಕ ಮನವಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಾಯಗೊಂಡ 100 ಮಂದಿಯಲ್ಲಿ 48 ಪೊಲೀಸ್​ ಸಿಬ್ಬಂದಿಯಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿಂಸಾಚಾರದಲ್ಲಿ ಮೃತಪಟ್ಟ ಪೊಲೀಸ್​ ಸಿಬ್ಬಂದಿ ಮತ್ತು ಇತರರಿಗೆ ಸಿಎಂ ಕೇಜ್ರಿವಾಲ್​ ಸಂತಾಪ ಸೂಚಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​​ ಆಗಮನ ವೇಳೆಯೇ ಕೆಲವರು ಪ್ರಚಾರಕ್ಕಾಗಿ ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರ ಸೃಷ್ಟಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿದ್ದು, ಸದ್ಯ ಈಶಾನ್ಯ ದೆಹಲಿಯಲ್ಲಿ 144 ಸೆಕ್ಷನ್​ ಹೇರಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + sixteen =
Remember me
