ದಾಂತೇವಾಡ (ಛತ್ತೀಸ್‌ಗಢ):ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ಮಂದಿ ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಬಿಭವ್ ಕುಮಾರ್​ಗೆ ಜಾಮೀನು ಸಿಕ್ಕಿದ ಬೆನ್ನಲ್ಲೇ ದ್ರೌಪದಿ ವಸ್ತ್ರಾಹರಣ ಚಿತ್ರ ಪೋಸ್ಟ್ ಮಾಡಿದ ಸ್ವಾತಿ ಮಾಲಿವಾಲ್​
ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ರೇಂಜ್ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿಟಿಐಗೆ ತಿಳಿಸಿದ್ದಾರೆ.
ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಗೆ ಸೇರಿದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಅದರ ಪಶ್ಚಿಮ ಬಸ್ತಾರ್ ವಿಭಾಗದ ಘಟಕಕ್ಕೆ ಸೇರಿದ ಮಾವೋವಾದಿಗಳ ಉಪಸ್ಥಿತಿಯ ಕುರಿತು ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.
ಮಧ್ಯಂತರ ಗುಂಡಿನ ಚಕಮಕಿಯು ದೀರ್ಘಕಾಲದವರೆಗೆ ನಡೆಯಿತು. ಇದರ ನಂತರ ‘ಸಮವಸ್ತ್ರ’ ಧರಿಸಿದ್ದ 9 ಮಾವೋವಾದಿಗಳ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಅಲ್ಲದೆ, ಹತ್ಯೆಗೀಡಾದ ನಕ್ಸಲೀಯರ ಬಳಿ ಇದ್ದ ಸ್ವಯಂಚಾಲಿತ ಬಂದೂಕುಗಳು, ಭಾರೀ ಪ್ರಮಾಣದ ಎಸ್‌ಎಲ್‌ಆರ್ ರೈಫಲ್‌ಗಳು, 303 ರೈಫಲ್‌ಗಳು ಹಾಗೂ 315 ಬೋರ್ ರೈಫಲ್‌ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ.
ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಹೇಳಿದರು. ಬಸ್ತಾರ್ ಪ್ರದೇಶವು ದಾಂತೇವಾಡ ಮತ್ತು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿದೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ಛತ್ತೀಸ್‌ಗಢದಲ್ಲಿ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 154 ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೆನ್ನೈನ ಬಯೋ ಸಿಎನ್​ಜಿ ಘಟಕಕ್ಕೆ ಡಿಕೆಶಿ ಭೇಟಿ: ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fourteen − eight =
Remember me
