ಮಧ್ಯ ಪ್ರದೇಶ:ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಮೇಲ್ವಿಚಾರಣೆಗೆ ಒಂಭತ್ತು ಸದಸ್ಯರನ್ನೊಳಗೊಂಡ ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ. ಈ ತಂಡ ಚೀತಾಗಳ ಬೆಳಗಣಿಗೆ ಹಾಗೂ ಅವುಗಳ ಆರೋಗ್ಯದ ಸ್ಥಿತಿಯ ಬಗ್ಗೆ ಮೇಲ್ವಿಚಾರಣೆ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದಲ್ಲಿ ಚೀತಾಗಳ ಸಂತತಿಯನ್ನು ಮರುಸ್ಥಾಪಿಸುವ ಉದ್ಧೇಶದ ಸಲುವಾಗಿ ನಮೀಬಿಯಾ ದೇಶದಿಂದ 8 ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು. ಈ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿತ್ತು.
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳ ಚಲನವಲನವನ್ನು ಗಮನಿಸಲಾಗುತ್ತಿದ್ದು, ಕೆಲವೊಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬಾಕಿಯಿದೆ. ಅದಾದ ಬಳಿಕೆ ನಮೀಬಿಯಾ ಚೀತಾಗಳನ್ನು ವೀಕ್ಷಿಸಬಹುದು ಎಂದು ಮನ್​ಕೀ ಬಾತ್​ನ 93ನೇ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.(ಏಜೆನ್ಸೀಸ್)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 8 =
Remember me
