ನವದೆಹಲಿ:ವಸತಿ ಸಮುಚ್ಚಯ ಒಂದರ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ತಿಂಗಳ ಮಗು ಸೇರಿದಂತೆ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಶಹದಾರ ಪ್ರದೇಶದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 5:22ರ ಸುಮಾರಿಗೆ ಘಟನೆ ನಡೆದಿದ್ದು, ನಾಲ್ವರು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH| Delhi: 4 people died in a fire that broke out at a building in Shahdara's Ram Nagar: Surendra Choudhary, DCP Shahdara(Visuals from the spot)pic.twitter.com/SPxKCbKvIV
ಇದನ್ನೂ ಓದಿ:ನಿಯಾಮವಳಿ ಉಲ್ಲಂಘನೆ; ಯತ್ನಾಳ್ ಮಾಲೀಕತ್ವದ ಕಾರ್ಖಾನೆ ಮುಚ್ಚುವಂತೆ ನೋಟಿಸ್
ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್, ವಸತಿ ಸಮುಚ್ಚಯ ಒಂದರ ನೆಲಮಹಡಿಯಲ್ಲಿ ಇರಿಸಲಾಗಿದ್ದ ವೈಪರ್‌ ಹಾಗೂ ರಬ್ಬರ್​ ಕಟ್​ ಮಾಡುವ ಮೆಷಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದುರಂತ ಸಂಭವಿಸಿದೆ. ಐದು ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ.
ಘಟನೆಯಲ್ಲಿ 9 ತಿಂಗಳ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆರು ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು GTB ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಾಲ್ಕು ಅಂತಸ್ತಿನ ಕಟ್ಟಡದ ನಿರ್ಮಾಣದ ವೇಳೆ ಯಾವುದೇ ಮುಂಜಾಗ್ರತ ಕ್ರಮ ಪಾಲಿಸದೆ ಇರುವುದು ಗಮನಕ್ಕೆ ಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ. ಅಧಿಕಾರಿಗಳು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 9 =
Remember me
