ಡೆಹ್ರಾಡೂನ್​:ಮಹಾಮಾರಿ ಕರೊನಾ ವೈರಸ್​ ಪುಟ್ಟ ಮಕ್ಕಳನ್ನು, ನವಜಾತ ಶಿಶುಗಳನ್ನೂ ಬಿಡದ ಹಾಗೆ ಕಾಡುತ್ತಿದೆ. ಸದ್ಯ ಉತ್ತರಾಖಂಡದಲ್ಲಿ 9 ತಿಂಗಳ ಮಗುವಿನಲ್ಲಿ ಕರೊನಾ ಕಾಣಿಸಿಕೊಂಡಿದ್ದು, ಅದು ರಾಜ್ಯದಲ್ಲೇ ಅತ್ಯಂತ ಕಿರಿಯ ಕರೊನಾ ರೋಗಿ ಎನ್ನಲಾಗಿದೆ.
ಈ ಮಗುವಿಗೆ ಕರೊನಾ ವೈರಸ್​ ತಗುಲಿದ್ದು ಅದರ ತಂದೆಯಿಂದ. ಆತ ತಬ್ಲಿಘಿ ಜಮಾತ್​ ಸಮಾವೇಶದಲ್ಲಿ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆ ಸಮಾವೇಶ ಎಲ್ಲಿ ನಡೆದಿತ್ತು ಎಂಬುದನ್ನು ಬಹಿರಂಗಪಡಿಸಿಲ್ಲ. ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ವಾಪಸ್​ ಆಗಿದ್ದ ವ್ಯಕ್ತಿಯಲ್ಲಿ ಕರೊನಾ ಸೋಂಕು ದೃಢಪಟ್ಟಿತ್ತು. ಅದೀಗ ಮಗುವಿಗೂ ತಗುಲಿದೆ.
ಮಗುವಿನ ತಾಯಿಗೆ ಕೊವಿಡ್​ ಸೋಂಕು ತಗುಲಿಲ್ಲ. ಅವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ನೆಗೆಟಿವ್​ ಎಂದು ವರದಿ ಬಂದಿದ್ದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ಉತ್ತರಾಖಂಡದಲ್ಲಿ ಒಟ್ಟು ಮೂರು ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
