ಫಿರೋಜಾಬಾದ್:ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯವು ಗುರುವಾರ 90 ವರ್ಷದ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧಿ ಗಂಗಾ ದಯಾಳ್‌ಗೆ 55 ಸಾವಿರ ರೂ. ದಂಡವನ್ನು ಕಟ್ಟುವಂತೆ ಆದೇಶಿಸಲಾಗಿದೆ.
42 ವರ್ಷಗಳ ಹಿಂದೆ ನಡೆದ ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ದಂಡ ಪಾವತಿಸಲು ತಪ್ಪಿದಲ್ಲಿ ಆರೋಪಿ 13 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಗಂಗಾ ದಯಾಳ್​, ಹಿಂದೆ ಒಟ್ಟು 10 ಜನ ದಲಿತರನ್ನು ಹತ್ಯೆ ಮಾಡಿದ್ದ. ಈ ಗಂಭೀರ ಪ್ರಕರಣದ ತೀರ್ಪು ಇದೀಗ ಹೊರ ಬಿದ್ದಿದೆ.
ಇದನ್ನೂ ಓದಿ:ಬೈಬಲ್​ ಹೊಂದಿದ್ದ ಕಾರಣಕ್ಕೆ 2 ವರ್ಷದ ಬಾಲಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಉತ್ತರ ಕೊರಿಯಾ!
ಸರಕಾರಿ ವಕೀಲ ರಾಜೀವ್ ಉಪಾಧ್ಯಾಯ, “1981ರಲ್ಲಿ ಸದುಪುರ ಗ್ರಾಮದಲ್ಲಿ ಹಿಂಸಾಚಾರ ನಡೆದಿದ್ದು, 10 ಮಂದಿಯನ್ನು ನಿರ್ದಯವಾಗಿ ಕೊಂದಿದ್ದ. ಈ ಸಂದರ್ಭ ಇಬ್ಬರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.ತನಿಖೆಯಲ್ಲಿ 10 ಮಂದಿಯನ್ನು ಆರೋಪಿಗಳೆಂದು ಗುರುತಿಸಲಾಗಿತ್ತು. ಐಪಿಸಿಯ ಸೆಕ್ಷನ್ 302 ಮತ್ತು 307 ಅಡಿಯಲ್ಲಿ ದಾಖಲಿಸಲಾಗಿತ್ತು.
ಹೈಕೋರ್ಟ್ ಆದೇಶದ ಮೇರೆಗೆ ಫಿರೋಜಾಬಾದ್ ಜಿಲ್ಲೆ ರಚನೆಯಾದ ನಂತರ ಪ್ರಕರಣವನ್ನು ಫಿರೋಜಾಬಾದ್‌ಗೆ ವರ್ಗಾಯಿಸಲಾಯಿತು. ಜೀವಂತವಾಗಿರುವ ಏಕೈಕ ಆರೋಪಿ ಗಂಗಾ ಸಹಾಯ್‌ಗೆ ಜೀವಾವಧಿ ಶಿಕ್ಷೆ ಮತ್ತು ₹ 55,000 ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತು. ಎಂದು ಹೇಳಿದ್ದಾರೆ.
ಇದನ್ನೂ ಓದಿ:ಶುಲ್ಕ ಪಾವತಿಸದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷೆ; ಶಿಕ್ಷಕಿ ಅಮಾನತು!
ಸಂತ್ರಸ್ತರಲ್ಲಿ ಒಬ್ಬರಾದ ಮಹಾರಾಜ್ ಸಿಂಗ್ ಅವರ ಸಂಬಂಧಿಯೊಬ್ಬರು, (ಘಟನೆಯ ಸಮಯದಲ್ಲಿ ಹುಟ್ಟಿರಲಿಲ್ಲ) ಅವರ ಹಿರಿಯರು ನೀಡಿದ್ದ ಮಾಹಿತಿಯಂತೆ “ಕುಟುಂಬದ 4 ಸದಸ್ಯರು ಕೊಲ್ಲಲ್ಪಟ್ಟರು ಮತ್ತು ಅವರ ಚಿಕ್ಕಪ್ಪನ ನೆರೆಹೊರೆಯಲ್ಲಿ ಇತರ 6 ಮಂದಿಯನ್ನು ಸಹ ಕೊಲ್ಲಲಾಗಿತ್ತು” ಎಂದು ಹೇಳಿದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 11 =
Remember me
