ನವದೆಹಲಿ/ಬೆಂಗಳೂರು:ಪಿಎಂ-ಕಿಸಾನ್ ಯೋಜನೆಯ 9.75 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗೆ ತಲಾ 2,000 ರೂಪಾಯಿಯಂತೆ ಒಟ್ಟು 19,500 ಕೋಟಿ ರೂಪಾಯಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ವರ್ಗಾವಣೆ ಮಾಡಿದರು. ಇನ್ನು ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯ ಎರಡನೇ ಕಂತಿನ 1023 ಕೋಟಿ ರೂ.ಗಳನ್ನು ರಾಜ್ಯದ 51.19 ಲಕ್ಷ ರೈತ ಖಾತೆಗಳಿಗೆ ನೇರವಾಗಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2019ರ ಫೆ.1ರಿಂದ ಅನುಷ್ಠಾನಗೊಳಿಸಲಾಗಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6 ಸಾವಿರ ರೂ.ಗಳ ಆರ್ಥಿಕ ನೆರವು ನೀಡುತ್ತಿದೆ.
ತಲಾ 2 ಸಾವಿರ ರೂ.ಗಳಂತೆ 3 ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಈವರೆಗೆ 55.06 ಲಕ್ಷ ರೈತ ಕುಟುಂಬಗಳು ಒಂದು ಕಂತು ಪಡೆಯುವ ಮೂಲಕ ಯೋಜನೆಯ ಲಾಭ ಪಡೆದಿದ್ದು, 2019ರ ಮಾರ್ಚ್​ನಿಂದ ಜು.2021 ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು 6940.07 ಕೋಟಿ.ರೂಗಳ ಆರ್ಥಿಕ ನೆರವು ನೀಡಲಾಗಿದೆ. 2021 ಪ್ರಸಕ್ತ ವರ್ಷದ ಎರಡನೇ ಕಂತಿನಲ್ಲಿ 51.19 ಲಕ್ಷ ರೈತರಿಗೆ 1023 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ.ನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 2849.16 ಕೋಟಿ ರೂ.ಗಳ ನೆರವು ನೀಡಲಾಗಿದೆ. ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಪಾವತಿ ಮಾಡಲಾಗುತ್ತಿದೆ. ದೇಶದ ರಾಜ್ಯಗಳ ಪೈಕಿ ಕರ್ನಾಟಕ ಅತಿಹೆಚ್ಚು ಶೇಕಡವಾರು ಆಧಾರ್ ಆಧಾರಿತ ವಹಿವಾಟು ನಿರ್ವಹಿಸಿದ್ದರಿಂದ 2020-21 ರಲ್ಲಿ ಕೇಂದ್ರ ಸರ್ಕಾರದಿಂದ ಪ್ರಶಸ್ತಿಯೂ ದೊರೆತಿದೆ.
ಮೋದಿ ಸಂವಾದ:ಆಯ್ದ ಫಲಾನುಭವಿಗಳ ಜತೆ ಸಂವಾದ ನಡೆಸಿದ ಮೋದಿ, ಪಿಎಂ-ಕಿಸಾನ್ ಯೋಜನೆಯಲ್ಲಿ ಅಂದಾಜು 1.60 ಲಕ್ಷ ಕೋಟಿ ರೂಪಾಯಿ ಅರ್ಹ ರೈತರ ಖಾತೆಗೆ ಸೇರುತ್ತದೆ. ಇದರಲ್ಲಿ ಈಗಾಗಲೇ ಕೋವಿಡ್ ಸಂಕಷ್ಟದ ಅವಧಿಯಲ್ಲಿ 1 ಲಕ್ಷ ಕೋಟಿ ರೂಪಾಯಿ ಬಿಡಗುಡೆಯಾಗಿದೆ. ಸಣ್ಣ ರೈತರು ಈಗ ಬಿಡುಗಡೆಯಾಗುತ್ತಿರುವ ಮೊತ್ತವನ್ನು ಬಿತ್ತನೆ ಕಾರ್ಯಗಳಿಗೆ ಬಳಸಬಹುದಾಗಿದೆ ಎಂದರು. ಮುಂದಿನ 25 ವರ್ಷದ ಅವಧಿಯಲ್ಲಿ ಅಂದರೆ ದೇಶ 100ನೇ ಸ್ವಾತಂತ್ರ್ಯ ದಿನ ಆಚರಿಸುವ ಹೊತ್ತಿನಲ್ಲಿ ನಮ್ಮ ಕೃಷಿ ಮತ್ತು ಕೃಷಿಕರು ದೇಶದ ಪರಿಸ್ಥಿತಿ ನಿರ್ಣಯಿಸುವಲ್ಲಿ ನಿರ್ಣಾಯಕ ಪಾತ್ರವಹಿಸಲಿದ್ದಾರೆ ಎಂದು ಪ್ರಧಾನಿ ಹೇಳಿದರು.
ಸಂವಾದದಲ್ಲಿ ಭಾಗಿಯಾದವರು:ಪ್ರಧಾನಿ ಮೋದಿ ಜತೆ ಸಂವಾದ ನಡೆಸಿದ ಫಲಾನುಭವಿಗಳು ಪ್ರತಿಭಾ ರಾಮ್ ವೆಲಿಪಿ (ಗೋವಾ), ದೇವೇಂದರ್ ದಾನೇಶ್ವರ ಜಪ್ಡೇಕರ್ (ಮಹಾರಾಷ್ಟ್ರ), ಶಾಮಚರಣ್ ಉಪಾಧ್ಯಾಯ (ಉತ್ತರ ಪ್ರದೇಶ), ಅಬ್ದುಲ್ ಮಜೀದ್ ವಾನಿ (ಜಮ್ಮು-ಕಾಶ್ಮೀರ), ಸುಶಾಂತ್ ಉನಿಯಾಲ್ (ಉತ್ತರಾಖಂಡ), ತಿಂಗ್ಚೇ ಗನ್​ಗ್ಟೆ(ಮಣಿಪುರ). ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಕೈಲಾಶ್ ಚೌಧರಿ ಕೂಡ ಉಪಸ್ಥಿತರಿದ್ದರು.
ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಸೇರಿದ್ದ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್​
ಅಮಾವಾಸ್ಯೆ ಎಂದರೆ ಸಾಕು ಈ ಮನೆಯವರಿಗೇನೋ ದುಗುಡ; ಮಾಟ-ಮಂತ್ರ ಮಾಡಿಸುತ್ತಿರುವುದ್ಯಾರು ಎಂಬುದಿನ್ನೂ ನಿಗೂಢ..


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + fourteen =
Remember me
