ನವದೆಹಲಿ:ಭಾರತದಲ್ಲಿ ಕರೊನಾ ವೈರಸ್​ ಸೋಂಕು ಅಪಾಯಕಾರಿಮಟ್ಟ ತಲುಪಿಲ್ಲ. ಈ ಬಗ್ಗೆ ಎಚ್ಚರಿಕೆ ವಹಿಸಿದರೆ ಸೋಂಕು ತಡೆಗಟ್ಟುವುದು ಕಷ್ಟವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದಶಿರ್ ಲವ ಅಗರ್​ವಾಲ್​ ಹೇಳಿದ್ದಾರೆ.ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ 24 ಗಂಟೆಗಳಲ್ಲಿ ಕರೊನಾ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ. ಹೊಸದಾಗಿ 92 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ 1 ಸಾವಿರ ಜನರು ಸೋಂಕಿತರಾಗಲು 12 ದಿನಗಳ ಬೇಕಾಯಿತು. ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕಿನ ಹರಡುವಿಕೆ ತುಂಬಾ ನಿಧಾನವಾಗಿದೆ. ಹಾಗಾಗಿ, ಇದನ್ನು ಸುಲಭದಲ್ಲಿ ನಿಯಂತ್ರಿಸಲು ಸಾಧ್ಯವಿದೆ. ಹಾಗೆಂದು ಮೈಮರೆಯುವಂತಿಲ್ಲ. ಸೋಂಕು ಹರಡದಂತೆ ತಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅಗತ್ಯ ಎಂದು ಹೇಳಿದ್ದಾರೆ.
ಸೋಂಕು ಪತ್ತೆ ಹಚ್ಚಲು ರಾಷ್ಟ್ರಾದ್ಯಂತ 115 ಸರ್ಕಾರಿ ಮತ್ತು 47 ಖಾಸಗಿ ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರಿ ಪ್ರಯೋಗಾಲಯಗಳಲ್ಲಿ ಭಾನುವಾರ ಒಂದೇ ದಿನ 3,501 ಮಾದರಿಗಳನ್ನು ಪರಿಶೀಲಿಸಲಾಗಿದೆ. ಖಾಸಗಿ ಪ್ರಯೋಗಾಲಯದಲ್ಲಿ ಒಟ್ಟು 1,334 ಮಾದರಿಗಳನ್ನು ಪರೀಸಲಾಗಿದೆ. ಇವುಗಳಲ್ಲಿ 99 ಜನರಲ್ಲಿ ಸೋಂಕು ಇರುವುದು ಖಚಿತಪಟ್ಟಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
