ಮುಂಬೈ:13 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತ ಮಾಡಿಸಿದ ಕೇಸ್​ನಲ್ಲಿ ಡಾಕ್ಟರ್​ ಮತ್ತು ಇಬ್ಬರು ನರ್ಸ್​ಗಳ ಬಂಧನದ ವೇಳೆ ಆಸ್ಪತ್ರೆ ಆವರಣದಲ್ಲಿ 11 ತಲೆಬುರುಡೆ ಮತ್ತು ಭ್ರೂಣಗಳ 54 ಎಲುಬುಗಳು ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಈ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಕದಂ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. 17 ವರ್ಷದ ಬಾಲಕನೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಸಂತ್ರಸ್ತ ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದಳು. ಬಾಲಕನ ಮನೆಯವರು ಕೊಲೆ ಬೆದರಿಕೆ ಹಾಕಿ ಜ.7ರಂದು ಗರ್ಭಪಾತ ಮಾಡಿಸಿದ್ದಾರೆ ಎಂದು ಬಾಲಕಿಯ ತಾಯಿ ಜ.9ರಂದು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಬಾಳಕಿಗೆ ಗರ್ಭಪಾತ ಮಾಡಿಸಲು ಆಸ್ಪತ್ರೆ 30,000 ರೂ. ಶುಲ್ಕವನ್ನೂ ಕಟ್ಟಿಸಿಕೊಂಡಿತ್ತು. ಸಂತ್ರಸ್ತೆಯ ತಾಯಿ ಕೊಟ್ಟ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿದ್ದು, ಆಸ್ಪತ್ರೆಯಡಾ.ರೇಖಾ ಕದಂ (38), ನಸ್​ಗಳಾದ ಪೂಜಾ ಧಾಟ್​ ಮತ್ತು ಸಂಗೀತಾ ಕಾಳೆ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪರಿಶೀಲನೆ ನಡೆಸುವಾಗ ಆಸ್ಪತ್ರೆ ಆವರಣದಲ್ಲಿ 11 ತಲೆಬುರುಡೆ ಮತ್ತು ಭ್ರೂಣಗಳ 54 ಎಲುಬುಗಳು ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗರ್ಭಪಾತ ಮಾಡಿಸಿಕೊಂಡ ಬಾಲಕಿಯ ಆರೋಗ್ಯ ಸ್ಥಿರವಾಗಿದ್ದು, ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಆವರಣದಲ್ಲಿ ಪತ್ತೆಯಾದ ಬುರುಡೆಗಳು ಮತ್ತು ಎಲುಬುಗಳನ್ನು ಪೋಸ್ಟ್​-ಮಾರ್ಟಂ ಮತ್ತು ಫಾರೆನ್ಸಿಕ್​ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. ಆಸ್ಪತ್ರೆ ಆವರಣದಲ್ಲಿ ಇನ್ನಷ್ಟು ಶೋಧ ಮುಂದುವರಿದಿದೆ ಎಂದು ಪೊಲೀಸ್​ ಇನ್​ಸ್ಪೆಕ್ಟರ್​ ಭಾನುದಾಸ್​ ಪಿದುರಕರ್​ ತಿಳಿಸಿದ್ದಾರೆ.
ಪುತ್ತೂರಲ್ಲಿ ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ! ನಾನು ನಿನ್ನಮ್ಮ ಪ್ಲೀಸ್..​ ಬಿಟ್​ಬಿಡು… ಎಂದು ಚೀರಾಡಿದ್ರೂ 2 ಬಾರಿ ವಿಕೃತಿ ಮೆರೆದ

ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟ ತುಮಕೂರು ಎಸ್​​ಪಿ! ಠಾಣೆ ಮುಂದೆ ಕಾರು ಬರ್ತಿದ್ದಂತೆ ಪಿಎಸ್​ಐ ಗಢಗಢ

ಅಪಘಾತದಲ್ಲಿ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು: ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಘೋರ ಸತ್ಯ ಇಲ್ಲಿದೆ

ಪ್ರೇಯಸಿಯನ್ನ ಕೊಂದು ಶವಕ್ಕೆ ಸ್ನಾನ ಮಾಡಿಸಿ ಇಡೀ ರಾತ್ರಿ ಅದರೊಟ್ಟಿಗೆ ಇದ್ದ! ಬೆಳಗಾಗುತ್ತಿದ್ದಂತೆ ನಾಟಕ ಶುರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 13 =
Remember me
