ನೋಯ್ಡಾ:ತಂದೆ ತಾಯಿಯೆಂದರೆ ಕಣ್ಣಿಗೆ ಕಾಣುವ ದೇವರು ಎನ್ನುತ್ತಾರೆ. ಆದರೆ ಅದೇ ದೇವರಿಂದ ಅಪ್ರಾಪ್ತ ಮಗಳೊಬ್ಬಳು ಅತ್ಯಾಚಾರಕ್ಕೊಳಗಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಈ ವಿಚಾರವಾಗಿ ಇದೀಗ ತಾಯಿ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದಾಳೆ.
ನೋಯ್ಡಾದ ಜುವರ್​ ಪ್ರದೇಶದಲ್ಲಿ ಇಂತದ್ದೊಂದು ಘಟನೆ ಬುಧವಾರದಂದು ನಡೆದಿದೆ. ಬುಲಂದ್​ಶಹರ್​ನ ದಂಪತಿ ಜುವರ್​ನ ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಜತೆ 15 ವರ್ಷದ ಮಗಳು ಮತ್ತು 10 ವರ್ಷದ ಮಗ ವಾಸವಿದ್ದರು. ಇತ್ತೀಚೆಗೆ 38 ವರ್ಷದ ಮನೆಯ ಒಡತಿ ಬುಲಂದ್​ಶಹರ್​ಗೆ ತೆರಳಿದ್ದಳು. ಈ ವೇಳೆ ಮನೆಯಲ್ಲಿ ಮಕ್ಕಳೊಂದಿಗೆ ಅಪ್ಪ ಮಾತ್ರ ಇದ್ದು, ದುಷ್ಕೃತ್ಯ ನಡೆದಿರುವುದಾಗಿ ತಿಳಿಸಲಾಗಿದೆ.
ಬುಧವಾರ ರಾತ್ರಿ ವೇಳೆ ಮನೆಯಲ್ಲಿ ಮಕ್ಕಳಿಬ್ಬರೇ ಇದ್ದರು. ಕಂಠ ಪೂರ್ತಿ ಕುಡಿದು ಬಂದ ಅಪ್ಪ, ಮಗಳ ಮೇಲೆ ಕಾಮುಕ ದೃಷ್ಟಿ ಬೀರಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಮಗಳು ಜೋರಾಗಿ ಚೀರಿಕೊಳ್ಳಲಾರಂಭಿಸಿದ ತಕ್ಷಣ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬಾಲಕಿ ಕೂಗುವ ಸದ್ದು ಕೇಳಿ ಅಕ್ಕ ಪಕ್ಕದ ಮನೆಯವರು ಬರುವಷ್ಟರಲ್ಲಿ ಆತ ಪರಾರಿಯಾಗಿದ್ದಾನೆ. ಅಕ್ಕಪಕ್ಕದವರು ತಕ್ಷಣವೇ ಬಾಲಕಿಯ ತಾಯಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ತಾಯಿ, ನೇರವಾಗಿ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದಾಳೆ. ಮಗಳ ಮೇಲೆ ಅತ್ಯಾಚಾರವೆಸಗಿದ ಗಂಡನ ವಿರುದ್ಧ ದೂರು ದಾಖಲಿಸಿದ್ದಾಳೆ. ಇದೀಗ ಪೊಲೀಸರು ಆರೋಪಿಯ ಹುಡುಕಾಟದಲ್ಲಿರುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)
ಹೆಂಡತಿ ನೋಡಲು ದೂರದ ಊರಿಂದ ಬಂದ ಗಂಡನಿಗೆ ಕಾದಿತ್ತು ಬಿಗ್​ ಶಾಕ್​! ಹಿಂಬದಿ ಬಾಗಿಲಿಂದ ಬಂದವ ಹೀಗೇಕೆ ಮಾಡಿದ?

ನಾಯಿ ಹೆಸರಿಗೆ 36 ಕೋಟಿ ರೂ. ಮೌಲ್ಯದ ಆಸ್ತಿ ಬರೆದ ಭೂಪ! ಸಾಕುವವರಿಗೂ ಸಿಗುತ್ತೆ ಲಕ್ಷ ಲಕ್ಷ ಹಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + four =
Remember me
