ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್​ ಅವರನ್ನು ಬೆಂಬಲಿಸಿ ಮಾಜಿ ಡಿಸಿಎಂ ತಾರಾ ಚಂದ್ ಸೇರಿದಂತೆ 50ಕ್ಕೂ ಹೆಚ್ಚು ಹಿರಿಯ ಮುಖಂಡರು ಕಾಂಗ್ರೆಸ್​ಗೆ ರಾಜೀನಾಮೆ ಕೊಟ್ಟಿದ್ದಾರೆ.
ಮಾಜಿ ಉಪ ಮುಖ್ಯಮಂತ್ರಿ ತಾರಾ ಚಾಂದ್, ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್, ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಜಂಟಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಆ.26ರಂದು ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ ರಾಜೀನಾಮೆ ಕೊಡುವ ಮೂಲಕ ಕಾಂಗ್ರೆಸ್​ಗೆ ಶಾಕ್​ ಕೊಟ್ಟಿದ್ದರು. ಆಜಾದ್​ರ ದಿಢೀರ್​ ರಾಜೀನಾಮೆಯು ಕಾಂಗ್ರೆಸ್​ ಪಾಳಯದಲ್ಲಿ ತಲ್ಲಣ ಮೂಡಿಸಿತ್ತು. ಅಷ್ಟೇ ಅಲ್ಲ, 4 ಪುಟಗಳ ರಾಜೀನಾಮೆ ಪತ್ರದಲ್ಲಿ ಪಕ್ಷ ತೊರೆಯುತ್ತಿರುವ ಕಾರಣವನ್ನೂ ತಿಳಿಸಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ದೂಷಿಸಿದ್ದರು.
ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ವಯಲದಲ್ಲಿ ಗುರುತಿಸಿಕೊಂಡಿದ್ದ ಗುಲಾಂ ನಬಿ ಆಜಾದ್​ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಆಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಬಹಳ ವರ್ಷಗಳಿಂದ ಕಾಂಗ್ರೆಸ್​ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅನುಭವಿ ನಾಯಕ ಆಜಾದ್​, ಆ.26ರಂದು ರಾಜೀನಾಮೆ ಪತ್ರವನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದರು. ಇದೀಗ ಇವರ ಹಾದಿಯನ್ನೇ ಹಿಡಿದ 50ಕ್ಕೂ ಹೆಚ್ಚು ಮುಖಂಡರು ಜಂಟಿಯಾಗಿ ರಾಜೀನಾಮೆ ಪತ್ರ ಬರೆದು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಇವರೆಲ್ಲರೂ ಆಜಾದ್​ ನೇತೃತ್ವದಲ್ಲಿ ಸ್ಥಾಪನೆಯಾಗಲಿರುವ ಹೊಸ ಪಕ್ಷಕ್ಕೆ ಸೇರಲಿದ್ದಾರೆ.
ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಗುಡ್​ ಬೈ: ಪಕ್ಷ ತೊರೆಯಲು ಕೊಟ್ಟ ಕಾರಣ ಹೀಗಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − six =
Remember me
