ನವದೆಹಲಿ:ಜನನ ಸಮಯದಲ್ಲಿ ಅಥವಾ ಜನಿಸಿದ ಸ್ವಲ್ಪ ಹೊತ್ತಿನಲ್ಲಿ ಮಗು ಮೃತಪಟ್ಟ ಸಂದರ್ಭದಲ್ಲಿ ಆ ಮಗುವಿನ ತಾಯಿಗೆ 60 ದಿನ ವಿಶೇಷ ರಜೆ ಪಡೆಯಲು ಅವಕಾಶವಿದೆ. ಕೇಂದ್ರ ಸರ್ಕಾರದ ಮಹಿಳಾ ಉದ್ಯೋಗಿಗಳು 60 ದಿನಗಳ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆದೇಶ ಹೊರಡಿಸಿದೆ.
ತಾಯಿಯ ಜೀವನದ ಮೇಲೆ ಪರಿಣಾಮ ಬೀರುವ ಮಗುವಿನ ಜನನ ಹಾಗೂ ಮರಣದ ಕಾರಣದಿಂದ ಉಂಟಾಗುವ ಭಾವನಾತ್ಮಕ ಆಘಾತವನ್ನು ಗಮನದಲ್ಲಿಟ್ಟುಕೊಂಡು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡಿಒಪಿಟಿ ತಿಳಿಸಿದೆ.
ಜನನ/ಹೆರಿಗೆಯ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಮಾತೃತ್ವ ರಜೆ ಮಂಜೂರು ಮಾಡಲು ಸೃಷ್ಟೀಕರಣಕ್ಕಾಗಿ ವಿನಂತಿಸುವ ಹಲವಾರು ಉಲ್ಲೇಖಗಳು/ಮನವಿಗಳನ್ನು ಸ್ವೀಕರಿಸುತ್ತಿರುವುದಾಗಿ ಇಲಾಖೆ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 20 =
Remember me
