ಚೆನ್ನೈ:ತಮಿಳುನಾಡಿನ ಎಐಎಡಿಎಂಕೆ ನಾಯಕ ಪನ್ನೀರಸೆಲ್ವಂ ಅವರ ಪತ್ನಿ ವಿಜಯಲಕ್ಷ್ಮಿ(66) ನಿಧರಾದರು.
ವಿಜಯಲಕ್ಷ್ಮೀ ಅವರಿಗೆ ಇತ್ತೀಚಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು(ಬುಧವಾರ ಬೆಳಗ್ಗೆ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತಿ, ಮೂವರು ಮಕ್ಕಳನ್ನು ಅಗಲಿದ್ದಾರೆ.
‘ಅನಾರೋಗ್ಯಿಂದ ಬಳಲುತ್ತಿದ್ದ ವಿಜಯಲಕ್ಷ್ಮಿ ಅವರು ಕಳೆದ 10 ದಿನದ ಹಿಂದೆ ಚೆನ್ನೈ ಜೆಮ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗುತ್ತಿದ್ದರು. ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಬೆಳಗಿನ ಜಾವ 5ಕ್ಕೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದರು’ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಎಐಎಡಿಎಂಕೆ ಸಹ ಸಂಯೋಜಕ ಓ. ಪನ್ನೀರಸೆಲ್ವಂ, ತಮಿಳುನಾಡು ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ. ಪತ್ನಿಯನ್ನು ಕಳೆದುಕೊಂಡ ಪನ್ನೀರಸೆಲ್ವಂಗೆ ಸಿಎಂ ಎಂ.ಕೆ. ಸ್ಟಾಲಿನ್ ಸೇರಿದಂತೆ ಸಚಿವರು ಮತ್ತು ಎಐಎಡಿಎಂಕೆ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ.
ಮಗಳ ಪ್ರಿಯಕರನ ಕೊಂದು ಜೈಲು ಸೇರಿದ ಅಪ್ಪ-ಅಮ್ಮ! ಎಲ್ಲವನ್ನೂ ಕಳೆದುಕೊಂಡಾಕೆ ಕೊನೆಗೂ ಬದುಕಲಿಲ್ಲ

ಅವ್ರು ದೊಡ್ಡವ್ರು ಬೇಡವ್ವ.. ಅಂದ್ರೂ ಮದ್ವೆ ಆಗ್ತೀನಂತ ಹಠ ಹಿಡಿದು ಅವನೊಂದಿಗೇ ಬಾರದ ಲೋಕಕ್ಕೆ ಹೋಗಿಬಿಟ್ಲು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
