ಮುಂಬೈ:ಬಾಲಿವುಡ್​ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು(ಬುಧವಾರ) ಬೆಳಗ್ಗೆ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅರುಣಾ ಭಾಟಿಯಾ ಅವರನ್ನು ಎರಡು ದಿನದ ಹಿಂದೆ ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಈ ವೇಳೆ ಸಿಂಡ್ರೆಲಾ ಸಿನಿಮಾ ಶೂಟಿಂಗ್​ಗಾಗಿ ಅಕ್ಷಯ್​ ಕುಮಾರ್​ ಇಂಗ್ಲೆಂಡ್ ಪ್ರವಾಸದಲ್ಲಿದ್ದರು. ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್​ ಅನ್ನು ಅರ್ಧಕ್ಕೆ ಬಿಟ್ಟು ಭಾರತಕ್ಕೆ ವಾಪಸ್​ ಆಗಿದ್ದರು.
ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಅಕ್ಷಯ್​ರ ಅಮ್ಮ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿಯನ್ನು ಸ್ವತಃ ಅಕ್ಷಯ್​ ಅವರೇ ಟ್ವೀಟ್​ ಮೂಲಕ ತಿಳಿಸಿದ್ದಾರೆ.
‘ಅವಳು ನನ್ನ ಮೂಲ. ಅಮ್ಮ ಬದುಕಿಲ್ಲ ಎಂಬ ಕಹಿಸತ್ಯ ನನಗೆ ಸಹಿಸಲಾಗದ ನೋವನ್ನು ಕೊಟ್ಟಿದೆ. ನನ್ನ ಅಮ್ಮ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಬೇರೆ ಜಗತ್ತಿನಲ್ಲಿರುವ ನನ್ನ ತಂದೆ ಜತೆ ನನ್ನಮ್ಮ ಸೇರಿಕೊಂಡಿದ್ದಾರೆ. ಓ ಶಾಂತಿ…’ ಎಂದು ಅಕ್ಷಯ್ ಕುಮಾರ್ ಟ್ವಿಟರ್​ನಲ್ಲಿ ಮನದ ನೋವನ್ನು ಅಕ್ಷರಕ್ಕಿಳಿಸಿದ್ದಾರೆ.
ನಕಲಿ ಐಎಎಸ್ ಅಧಿಕಾರಿ ಬಂಧನ! ಈತ ರವಿಶಂಕರ್ ಗುರೂಜಿ ಅವರಿಗೂ ಬಲೆ ಬೀಸಿದ್ದ

ಬೆಂಗಳೂರಿನ ಮಹಿಳಾ ಟೆಕ್ಕಿ ಮೇಲೆ ಅತ್ಯಾಚಾರ: ಮೂವರೂ ಮದ್ಯ ಕುಡಿದೆವು, ಪ್ರಜ್ಞೆ ಬಂದಾಗ ಆತ ಬೆತ್ತಲಾಗಿದ್ದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 3 =
Remember me
