ಬೆಂಗಳೂರು:ತಿರುಮಲ ಬೆಟ್ಟದಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಎಲ್ಲ ಅರ್ಜಿತ ಸೇವೆಗಳನ್ನು ಏ.1ರಂದು ಪುನರಾರಂಭಿಸಲು ಟಿಟಿಡಿ ನಿರ್ಧರಿಸಿದೆ.
ಕೋವಿಡ್​ ಹಿನ್ನೆಲೆಯಲ್ಲಿ 2020ರ ಮಾ.20ರಿಂದ ತಿರುಪತಿ ದೇವಸ್ಥಾನದಲ್ಲಿ ಎಲ್ಲ ರೀತಿಯ ಅರ್ಜಿತ ಸೇವೆಗಳನ್ನು ನಿಲ್ಲಿಸಲಾಗಿತ್ತು. ಈಗ ಕೋವಿಡ್​ ಸೋಂಕಿತರ ಸಂಖ್ಯೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸೇವೆಗಳನ್ನು ಆರಂಭಿಸಲಾಗುತ್ತಿದೆ. ಇದರ ಜತೆಗೆ ವರ್ಚುವಲ್​ ಸೇವೆಯೂ ಮುಂದುವರಿಯಲಿದೆ ಎಂದು ಟಿಟಿಡಿ ತಿಳಿಸಿದೆ.
ದೇವಸ್ಥಾನದಲ್ಲಿ ಸುಪ್ರಭಾತಂ, ತೋಮಾಲ, ಅರ್ಚನ, ಅಷ್ಟದಳ ಪಾದ ಪದ್ಮಾರಾಧನೆ, ತಿರುಪ್ಪವಾದ, ಅಭಿಷೇಕ, ಕಲ್ಯಾಣೋತ್ಸವ, ಡೋಲೋತ್ಸವ, ಅರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕಾರ ಸೇವೆಗಳು ಮತ್ತೆ ಆರಂಭವಾಗಲಿವೆ. ಕರೊನಾಗಿಂತ ಮುಂಚೆ ಜಾರಿಯಲ್ಲಿದ್ದ ಎಲ್ಲ ಸೇವೆಗಳೂ ಈಗ ಮುಂದುವರಿಯಲಿವೆ. ಕಾಯ್ದಿರಿಸಿದ ಭಕ್ತರಿಗೆ ಮಾತ್ರ ದರ್ಶನ ವ್ಯವಸ್ಥೆ ಇರಲಿದ್ದು, ನೇರವಾಗಿ ಸೇವೆಗಳಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದೆ.
ಮಂಡ್ಯದಲ್ಲಿ ಇದೆಂಥಾ ಅಸಹ್ಯ? ಗ್ರಾಮದೇವತೆ ಹಬ್ಬದಲ್ಲಿ ಬಾಲಕನನ್ನು ಎಳೆದಾಡಿ ಅಶ್ಲೀಲವಾಗಿ ವರ್ತಿಸಿದ ನರ್ತಕಿಯರು!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರಕ್ಕೂ ಕಳವಳ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + sixteen =
Remember me
