ರಾಯ್ಪುರ:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಬಂಧಿ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡೆ ಕರುಣಾ ಶುಕ್ಲಾ ಮಂಗಳವಾರ ಬೆಳಗ್ಗೆ ಕೋವಿಡ್​ ಸೋಂಕಿನಿಂದ ಮೃತಪಟ್ಟಿದ್ದಾರೆ.
ವಾಜಪೇಯಿ ಅವರ ಸೋದರ ಸೊಸೆ ಕರುಣಾ ಶುಕ್ಲಾ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗಿನ ಜಾವ ಕೊನೆಯುಸಿರೆಳೆದರು.ಇದನ್ನೂ ಓದಿರಿಕರೊನಾ ಸಂಕಷ್ಟ: ಹಸಿವಾಗ್ತಿದೆ ಊಟ ಕೊಡಿ… ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡಿದ ವಲಸೆ ಕಾರ್ಮಿಕರು!
ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶುಕ್ಲಾ, ಮೂರು ದಶಕ ಕಾಲ ಬಿಜೆಪಿಯಲ್ಲಿ ಸಕ್ರಿಯವಾಗಿದ್ದರು. 2013ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. 2018ರ ಛತ್ತೀಸ್​ಗಢ ವಿಧಾನಸಭೆ ಚುನಾವಣೆಯಲ್ಲಿ ರಾಜನಂದಗಾಂವ್ ಕ್ಷೇತ್ರದಲ್ಲಿ ಮಾಜಿ ಸಿಎಂ ರಮಣ್ ಸಿಂಗ್ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು.
ಕರುಣಾ ಶುಕ್ಲಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಛತ್ತೀಸ್​ಗಢ ಸಿಎಂ ಭೂಪೇಶ್​ ಬಾಘೇಲ್, ನನ್ನ ಪಾಲಿಗೆ ತಾಯಿಯಂತಿದ್ದ ಕರುಣಾ ಶುಕ್ಷಾ ಅವರ ನಿಧನ ಸುದ್ದಿ ಕೇಳಿ ಆಘಾತವಾಯಿತು. ನಿರ್ದಯಿ ಕರೊನಾ… ಎಂದು ಟ್ವೀಟ್​ ಮಾಡಿದ್ದಾರೆ.
ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಪೊಲೀಸ್​ ಜೀಪ್​ ಮೇಲೆ ಮರಳು ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿ: ಸ್ಥಳದಲ್ಲೇ ಪೇದೆ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 14 =
Remember me
