ಮುಂಬೈ:ಇಲ್ಲಿನ ನಾಗಪಾದ ಮಾಲ್​ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, 24 ಫೈರ್ ಇಂಜಿನ್​ಗಳು, 16 ಜಂಬೋ ಟ್ಯಾಂಕ್​ಗಳು ಹಾಗೂ 250ಕ್ಕೂ ಅಧಿಕ ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಇದನ್ನು ಲೆವೆಲ್​-5 ಅಗ್ನಿಆಕಸ್ಮಿಕ ಎಂದು ಘೋಷಿಸಿದ್ದಾರೆ.
ಗುರುವಾರ ರಾತ್ರಿ ಒಂಬತ್ತು ಗಂಟೆಗೇ ಬೆಂಕಿ ತಗುಲಿದ್ದು, ಬೆಳಗಾಗುವಷ್ಟರಲ್ಲಿ ಧಗಧಗಿಸುವ ಬೆಂಕಿಯ ಕೆನ್ನಾಲಗೆಗಳು ಕಾಣಿಕೊಂಡಿವೆ. ಬೆಂಕಿಯನ್ನು ಆರಿಸಲು ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಮಾಲ್​ ಪಕ್ಕದ 55 ಮಹಡಿಯ ಕಟ್ಟಡವನ್ನು ತೆರವುಗೊಳಿಸಲಾಗಿದ್ದು, ನಿವಾಸಿಗರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.
ಮುಂಬೈ ಮೇಯರ್​ ಕಿಶೋರಿ ಪೆಡ್ನೇಕರ್​, ಶಾಸಕ ಅಮಿನ್ ಪಟೇಲ್​ ಸ್ಥಳಕ್ಕೆ ಭೇಟಿ ನೀಡಿದ್ದು, ಪಾಲಿಕೆ, ಪೊಲೀಸ್ ಹಾಗೂ ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ. (ಏಜೆನ್ಸೀಸ್​)
#WATCH: Firefighting operation underway at a mall in Nagpada area in Mumbai where a fire broke out last night.
It has been declared a level-5 fire.#Maharashtrapic.twitter.com/YDpgpRHXcm
— ANI (@ANI)October 23, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 9 =
Remember me
