ವಾರ್ಧಾ:ಸೇತುವೆ ಮೇಲಿಂದ ಪ್ರಪಾತಕ್ಕೆ ಕಾರು ಬಿದ್ದು 7 ಮೆಡಿಕಲ್​ ವಿದ್ಯಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ಮೃತರ ಪೈಕಿ ಒಬ್ಬ ಯುವಕ ಬಿಜೆಪಿ ಶಾಸಕರೊಬ್ಬರ ಪುತ್ರ.
ಇಂತಹ ಭೀಕರ ಅಪಘಾತ ಸೋಮವಾರ ತಡರಾತ್ರಿ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ವಾರ್ಧಾ-ಯವತ್ಮಾಲ್​ ಹೆದ್ದಾರಿಯ ಸೆಲ್ಸುರಾ ಬಳಿ ನಡೆದಿದೆ.
ತಿರೋಡಾ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ರಹಂಗ್‌ಡೇಲ್ ಅವರ ಪುತ್ರ ಆವಿಷ್ಕರ್ ಮತ್ತು ಈತನ ಸ್ನೇಹಿತರಾದ ನೀರಜ್ ಚೌಹಾನ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್, ಪವನ್ ಶಕ್ತಿ ಮೃತರು. ಇವರೆಲ್ಲರೂ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು. 7 ಮಂದಿಯೂ ಸೋಮವಾರ ರಾತ್ರಿ ದಿಯೋಲಿಯಿಂದ ವಾರ್ಧಾ ಕಡೆಗೆ ಝೈಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆ ಮೇಲಿಂದ 50 ಅಡಿ ಆಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ 7 ಮಂದಿಯೂ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ.
Maharashtra | 7 medical students, including BJP MLA from Tirora constituency Vijay Rahangdale’s son Avishkar Rahangdale, died after their car fell from a bridge near Selsura around 11.30 pm on Monday (January 24)pic.twitter.com/Hc9WC7sZvx
— ANI (@ANI)January 25, 2022

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮೇಲಕ್ಕೆ ಎತ್ತಿ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + two =
Remember me
