ಇಂದೋರ್:ಸಾರ್ವಜನಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾನೆ. ಈ ಘಟನೆ ಇಂದೋರ್​​ನಲ್ಲಿ ನಡೆದಿದೆ.
ಮಧ್ಯಪ್ರದೇಶದ ಬಿಎಸ್ಸಿ ವಿದ್ಯಾರ್ಥಿ ಪುನೀತ್ ದುಬೆ (21) ಮೃತ. ಈತ ಇಂದೋರ್‌ನ ರಂಜಿತ್ ಸಿಂಗ್ ಕಾಲೇಜ್ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಮಧ್ಯಪ್ರದೇಶ ಲೋಕ ಸೇವಾ ಆಯೋಗದ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಏನಾಯಿತೋ ಗೊತ್ತಿಲ್ಲ ಆದರೆ ಶುಕ್ರವಾರ ರಾತ್ರಿ ಹಾಸ್ಟೆಲ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೂರು ದಿನಗಳ ಬಳಿಕ ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಹಾಸ್ಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.
ಫ್ಯಾನ್‌ಗೆ ನೇತಾಡುತ್ತಿದ್ದ ಪುನೀತ್ ಉಡುಗೆ ಎಲ್ಲರನ್ನು ಅಚ್ಚರಿಗೊಳಿಸಿದೆ. ಸೀರೆ ಉಟ್ಟು, ಬಳೆ ತೊಟ್ಟು ಮೇಕಪ್​​ ಮಾಡಿಕೊಂಡು ಮಹಿಳೆಯರ ಉಡುಗೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮೇಲಾಗಿ ಪುನೀತ್ ಕಣ್ಣಿಗೆ ಬಟ್ಟೆ ಕಟ್ಟಲಾಗಿದೆ. ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತದೇಹದ ಬಳಿ ನೆಲದ ಮೇಲೆ ರಕ್ತದ ಮಡುವು ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪುನೀತ್ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪುನೀತ್ ತಂದೆ ತ್ರಿಭುವನ್ ಪೊಲೀಸರಿ ನೀಡಿದ ಮಾಹಿತಿ ಪ್ರಕಾರ, ಪ್ರತಿ ರಾತ್ರಿ ಮನೆಗೆ ಕರೆ ಮಾಡುತ್ತಿದ್ದ, ಗುರುವಾರ ರಾತ್ರಿ 10 ಗಂಟೆಗೆ ಕೊನೆಯ ಬಾರಿಗೆ ಪುನೀತ್ ತನ್ನ ತಾಯಿ ವಿಭೂತಿ ದುಬೆ ಅವರೊಂದಿಗೆ ಮಾತನಾಡಿದ್ದಾನೆ. ಈಗ ರಜೆ ಇದ್ದ ಕಾರಣ ಬೆಳಗ್ಗೆ 9 ರಿಂದ ರಾತ್ರಿ 9 ರವರೆಗೆ ಕೋಚಿಂಗ್ ಸೆಂಟರ್‌ನಲ್ಲಿ ತರಗತಿಗೆ ಹಾಜರಾಗುತ್ತಿದ್ದ. ಶುಕ್ರವಾರ ಪುನೀತ್ ಅವರ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ಅವರು ಹೇಳಿದರು. ಪುನೀತ್ ತನ್ನ ಸ್ನೇಹಿತರಿಗೆ ಕರೆ ಮಾಡಿದಾಗ ಅವರು ಪುನೀತ್ ಅವರ ಕೋಣೆಯ ಒಳಗಿನಿಂದ ಕೊಠಡಿಯನ್ನು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
