ಸುಲ್ತಾನಪುರ್​:ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಬಂದಿದ್ದ ಕಾಮುಕರು ಇದೀಗ ಸಂತ್ರಸ್ತೆಯ ಸಹೋದರನ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿದ್ದಾರೆ.
ಸಹೋದರಿ ಮೇಲೆ ನಡೆದಿದ್ದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಕಾಮುಕರ ವಿರುದ್ಧ ಆಕೆಯ ಅಣ್ಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದ. ಇದೇ ಕಾರಣಕ್ಕಾಗಿ ಮೇಲೆ ದ್ವೇಷ ಸಾಧಿಸುತ್ತಿದ್ದ ಆರೋಪಿಗಳು ಇದೀಗ ಮರ್ಮಾಂಗ ಕತ್ತರಿಸಿದ್ದಾರೆ. ಗಾಯಾಳುವಿನ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.
2019ರಲ್ಲಿ ಯುವತಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯುವತಿಯ ಸಹೋದರ ಪ್ರಕರಣ ದಾಖಲಿಸಿದ್ದ. ಆರೋಪಿಗಳನ್ನು ಬಂಧಿಸಲಾಗಿತ್ತು. ಇತ್ತೀಚಿಗೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಆರೋಪಿಗಳು, ಅತ್ಯಾಚಾರ ಕೇಸ್​ ಸಂಬಂಧ ರಾಜಿ ಮಾಡಿಕೊಳ್ಳುವಂತೆ ಯುವತಿಯ ಸಹೋದರನಿಗೆ ಬೆದರಿಕೆ ಹಾಕಿದ್ದರು. ಇದಕ್ಕೆ ಆತ ಒಪ್ಪಿರಲಿಲ್ಲ. ಸಹೋದರಿಗೆ ಆದ ಅನ್ಯಾಯಕ್ಕೆ ನ್ಯಾಯ ಸಿಗಲೇಬೇಕು, ತಪ್ಪಿತಸ್ಥರಿಗೆ ಕಾನೂನು ರೀತ್ಯ ಶಿಕ್ಷೆ ಆಗಲೇಬೇಕೆಂದಿದ್ದ. ಇದೇ ವಿಚಾರಕ್ಕೆ ದುಷ್ಕರ್ಮಿಗಳು ಆತನ ಮೇಲೆ ದ್ವೇಷ ಸಾಧಿಸುತ್ತಿದ್ದರು.
ಕಳೆದ ಜೂನ್​ 26ರಂದು ಸಂತ್ರಸ್ತೆ ಸಹೋದರನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಆತನ ಜನನಾಂಗವನ್ನೇ ಕತ್ತರಿಸಿ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ನ್ಯಾಯ ಮತ್ತು ರಕ್ಷಣೆ ಕೋರಿ ಸಂತ್ರಸ್ತ ಕುಟುಂಬ ಸಿಎಂ ಯೋಗಿ ಆದಿತ್ಯನಾಥ್​ ಅವರ ಮೊರೆ ಹೋಗಿದೆ.
ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

ಕೂಲಿಗಾರರ ಇಬ್ಬರು ಹೆಣ್ಣುಮಕ್ಕಳು ಮಾಲೀಕನ ಜಮೀನಿನಲ್ಲೇ ದುರಂತ ಸಾವು!

ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + ten =
Remember me
