ಥಾಣೆ:ಮಹಿಳಾ ಕಾರ್ಪೋರೇಟರ್​ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ನರೇಂದ್ರ ಮೆಹ್ತಾ ಸೇರಿ ಇಬ್ಬರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಶಾಸಕ ನರೇಂದ್ರ ಮೆಹ್ತಾ ಮತ್ತು ಸಂಜಯ್​ ತಾರ್ಕರ್​ ಹೆಸರಿನ ವ್ಯಕ್ತಿ 1999ರಿಂದಲೇ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದಾರೆ. ದೂರು ನೀಡುವಂತಿಲ್ಲ ಎಂದು ಬೆದರಿಸಿದ್ದಾಗಿ ಸಂತ್ರಸ್ತೆಯೊಬ್ಬಳು ದೂರನ್ನು ನೀಡಿದ್ದಾಳೆ. ಕಾರ್ಪೋರೇಟರ್​ ಆಗಿರುವ ಆಕೆಯ ದೂರನ್ನು ಮೀರಾ ಭಾಯಂದರ್​ ನಗರದ ಪೊಲೀಸರು ದಾಖಲಿಸಿಕೊಂಡಿದ್ದು, ಎಫ್​ಐಆರ್​ ಹಾಕಿದ್ದಾರೆ.
ಮಹಿಳಾ ಕಾರ್ಪೋರೇಟರ್​ ತನ್ನ ಅಳಲನ್ನು ಹೇಳಿಕೊಳ್ಳುತ್ತಿರುವ ವಿಡಿಯೋ ಕಳೆದೆರೆಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.
ಆರೋಪಿ ನರೇಂದ್ರ ಮೆಹ್ತಾ ಮಹಾರಾಷ್ಟ್ರದ ಮೀರಾ ಭಾಯಂದರ್​ ಕ್ಷೇತ್ರದ ಬಿಜೆಪಿ ಶಾಸಕನಾಗಿದ್ದು ಮೂರು ದಿನಗಳ ಹಿಂದೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಇಬ್ಬರು ಆರೋಪಿಗಳೂ ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 12 =
Remember me
