ಒಡಿಶಾ:ಜನರ ಮೇಲೆಯೇ ಶಾಸಕರ ಕಾರು ಹರಿದು 22ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ಶನಿವಾರ ಒಡಿಶಾದ ಖುರ್ದಾ ಜಿಲ್ಲೆಯ ಬಾನಾಪುರದಲ್ಲಿ ಸಂಭವಿಸಿದೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ.
ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಅವರ ಕಾರು ಜನರ ಗುಂಪಿನ ಮೇಲೆ ಏಕಾಏಕಿ ಹರಿದ ಪರಿಣಾಮ ಘಟನೆಯಲ್ಲಿ ಬಾಣಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆರ್​.ಆರ್. ಸಾಹು ಸೇರಿದಂತೆ 7 ಪೊಲೀಸ್ ಸಿಬ್ಬಂದಿ, ಪತ್ರಕರ್ತರು ಸೇರಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಭುವನೇಶ್ವರದ ಏಮ್ಸ್‌ಗೆ ಕರೆದೊಯ್ಯಲಾಗಿದೆ.

ಬ್ಲಾಕ್ ಅಧ್ಯಕ್ಷರ ಆಯ್ಕೆಗೆ ಬಾನಾಪುರದಲ್ಲಿ ಶನಿವಾರ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಕಚೇರಿ ಹೊರಗೆ ಜನರ ಗುಂಪು ಸೇರಿತ್ತು. ಈ ವೇಳೆ ಏಕಾಏಕಿ ಕಾರು ಚಲಾಯಿಸಿದ ಪರಿಣಾಮ ಕಾರು ಜನರ ಮೇಲೆ ಹರಿದಿದೆ. ಈ ದುರ್ಘಟನೆಯಲ್ಲಿ ಚಿಲಿಕಾ ಕ್ಷೇತ್ರದ ಶಾಸಕ ಪ್ರಶಾಂತ್ ಜಗದೇವ್ ಅವರೂ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಪ್ರಶಾಂತ್​ ಜಗದೇವ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.
ಕಾರ್ಯಕ್ರಮ ನಡೆಯುವಾಗಲೇ ಕುಸಿದ ಶಾಮಿಯಾನ: ಡಾ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ, ಶಾಸಕ ಅಪಾಯದಿಂದ ಪಾರು

ನಿಮ್ಮ ಪ್ರೀತಿ-ವಿಶ್ವಾಸಕ್ಕೆ ನಾನು ಕರಗಿ ಹೋದೆ… ಅರಳಿಕಟ್ಟೆ ಮೇಲೆ ಕೂತು ಗ್ರಾಮಸ್ಥರ ಸಮಸ್ಯೆ ಆಲಿಸುತ್ತಾ ಭಾವುಕರಾದ ಸಿಎಂ

6 ವರ್ಷದ ಹಿಂದೆ ಸಂತೆಯಲ್ಲಿ ಬೇರ್ಪಟ್ಟಿದ್ದ ತಾಯಿ-ಮಗನನ್ನು ಒಂದುಗೂಡಿಸಿದ ಆಧಾರ್ ಕಾರ್ಡ್​! ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಯಲಹಂಕ ಪೊಲೀಸರು

ನಿಮ್ಮ ಪ್ರೀತಿ-ವಿಶ್ವಾಸಕ್ಕೆ ನಾನು ಕರಗಿ ಹೋದೆ… ಅರಳಿಕಟ್ಟೆ ಮೇಲೆ ಕೂತು ಗ್ರಾಮಸ್ಥರ ಸಮಸ್ಯೆ ಆಲಿಸುತ್ತಾ ಭಾವುಕರಾದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
