ನವದೆಹಲಿ:27 ವಾರ ಕಳೆದ ತನ್ನ ಗರ್ಭಧಾರಣೆಯನ್ನು ಕೊನೆಗೊಳಿಸುವಂತೆ ಕೋರಿ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿ:ಸತತ 4 ಸೋಲು..ತಂಡದ ವೈಫಲ್ಯ ಒಪ್ಪಿಕೊಂಡ ರಾಜಸ್ಥಾನ್​ ರಾಯಲ್ಸ್ ನಾಯಕ ಸ್ಯಾಮ್ಸನ್!
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸಂದೀಪ್ ಮೆಹ್ತಾ ಮತ್ತು ಎಸ್.ವಿ.ಎನ್.ಭಟ್ಟಿ ಅವರಿದ್ದ ನ್ಯಾಯಪೀಠವು ಈ ವಿಚಾರಣೆ ನಡೆಸಿ ಮೇಲ್ಕಂಡಂತೆ ತೀರ್ಪು ನೀಡಿದೆ.
ಅರ್ಜಿದಾರರು 20 ವರ್ಷದ ಅವಿವಾಹಿತ ವಿದ್ಯಾರ್ಥಿಯಾಗಿದ್ದು, ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಳೆ. ಏಪ್ರಿಲ್ 16 ರಂದು ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆ ಸೇರಿದಾಗ ಗರ್ಭಧಾರಣೆಯ ಬಗ್ಗೆ ತಿಳಿದಿದೆ. ಆ ಹೊತ್ತಿಗೆ ಗರ್ಭಧಾರಣೆಯಾಗಿ 27 ವಾರಗಳಾಗಿತ್ತು.
ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ಆರ್.ಗವಾಯಿ, ‘ನಾವು ಕಾನೂನನ್ನು ಹೊರತುಪಡಿಸಿ ಬೇರೆ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.
ವೈದ್ಯಕೀಯ ಗರ್ಭಪಾತ ಕಾಯ್ದೆಯ ಪ್ರಕಾರ, ಗರ್ಭಧಾರಣೆಯನ್ನು ಕೊನೆಗೊಳಿಸುವ ಮಿತಿ 24 ವಾರಗಳು. ಭ್ರೂಣದೊಂದಿಗೆ ಹೆಚ್ಚಿನ ಸಮಸ್ಯೆಗಳಿದ್ದರೆ ಅಥವಾ ತಾಯಿಯ ಜೀವಕ್ಕೆ ಅಪಾಯವಿದ್ದರೆ ಮಾತ್ರ ಈ ನಿಯಮಗಳನ್ನು ಉಲ್ಲಂಘಿಸಬಹುದು ಎಂದು ಅಭಿಪ್ರಾಯಪಟ್ಟರು.
ಅರ್ಜಿದಾರರ ಮಾನಸಿಕ ಮತ್ತು ದೈಹಿಕ ಆರೋಗ್ಯ ಅಪಾಯದಲ್ಲಿದೆ ಎಂದು ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಮೆಹ್ತಾ, ಮಗುವಿನ ಜೀವನದ ಬಗ್ಗೆ ಏನು? ಗರ್ಭದಲ್ಲಿರುವ ಮಗುವಿಗೆ ಬದುಕುವ ಮೂಲಭೂತ ಹಕ್ಕಿದೆ, ಮಗುವಿನ ಜನನಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಸೌಲಭ್ಯಗಳಿಗಾಗಿ ಏಮ್ಸ್ ಅನ್ನು ಸಂಪರ್ಕಿಸಲು ನ್ಯಾಯಾಲಯವು ಅರ್ಜಿದಾರರಿಗೆ ಸ್ವಾತಂತ್ರ್ಯ ನೀಡಿತು.
12 ವರ್ಷದ ಬಳಿಕ ಹಾಲಿವುಡ್​ಗೆ ನಟಿ ಟಬು ರೀ ಎಂಟ್ರಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 + 20 =
Remember me
