ನವದೆಹಲಿ:ಸಂಪುಟ ಪುನಾರಚನೆಗೆ ಯಾವುದೇ ಪಟ್ಟಿ ಸಿದ್ಧವಾಗಿಲ್ಲ. ನಾನು ಯಾವುದೇ ಹೆಸರುಗಳನ್ನು ಅಮಿತ್ ಷಾ ಅವರಿಗೆ ಕೊಟ್ಟಿಲ್ಲ. ಆದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುವುದಾಗಿ ಅಮಿತ್​ ಷಾ ಅವರು ತಿಳಿಸಿದ್ದಾರೆ. ರಾಜ್ಯ ರಾಜಕೀಯದ ಸ್ಥಿತಿಗತಿ ಆಧರಿಸಿ ಬದಲಾವಣೆ ಆಗಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕೆಲ ದಿನಗಳ ಹಿಂದೆ ಕರ್ನಾಟಕಕ್ಕೆ ಬಂದಿದ್ದ ಅಮಿತ್​ ಷಾ, ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್​ ರಚನೆ ಸಂಬಂಧ ದೆಹಲಿಯಲ್ಲಿ ಚರ್ಚೆ ಮಾಡೋಣ ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರವೇ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ, ಬುಧವಾರ ಅಮಿತ್​ ಷಾ ಜತೆ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆಯೋ, ಪುನರಚನೆಯೋ ಎನ್ನುವ ಬಗ್ಗೆ ಚರ್ಚೆಯಾಗಿದೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ನಡ್ಡಾ ಅವರ ಜತೆ ಮಾತನಾಡುತ್ತೇನೆ ಎಂದಿದ್ದಾರೆ. ಎರಡ್ಮೂರು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆದರೆ ನಾನು ಯಾರ ಹೆಸರನ್ನೂ ಅಮಿತ್ ಷಾ ಅವರಿಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿದೆ. ಸಿಎಂ ದೆಹಲಿ ಭೇಟಿಯಲ್ಲಿ ಈ ಬಗ್ಗೆ ಚರ್ಚೆಯಾಗುತ್ತೆ ಎಂಬ ಮಾತೂ ಕೇಳಿಬಂದಿತ್ತು. ಆದರೆ, ಈ ಬಗ್ಗೆ ಸಿಎಂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ತಡರಾತ್ರಿ ಬೈಕ್​ನಲ್ಲಿ ಮಹಿಳೆ ಶವ ಸಾಗಿಸುವಾಗ ರಾಮನಗರ ಡಿಸಿ ಕಚೇರಿ ಎದುರೇ ಅಪಘಾತ! ಬಯಲಾಯ್ತು ಗಂಡ-ಹೆಂಡ್ತಿ ರಹಸ್ಯ

PSI ಹುದ್ದೆಗೆ ಆಯ್ಕೆಯಾಗಿದ್ದ ತಮ್ಮನ ಬಂಧನ ಬೆನ್ನಲ್ಲೇ ಅಣ್ಣ ಆತ್ಮಹತ್ಯೆ! ಸಾವಿನ ಸುತ್ತ ಅನುಮಾನದ ಹುತ್ತ

ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

Sign in to your account
Please enter an answer in digits:seventeen + 4 =
Remember me
