ಕೋಝಿಕ್ಕೋಡ್(ಕೇರಳ):ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಸಚಿವ ಆರ್ಯಾದನ್ ಮುಹಮ್ಮದ್ (87) ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಿಲಂಬೂರು ಕ್ಷೇತ್ರದಿಂದ 8 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಮೂರು ಬಾರಿ ಸಚಿವರಾಗಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಆರ್ಯಾದನ್​ ಅವರು ಒಂದು ವಾರದಿಂದ ಕೋಝಿಕ್ಕೋಡ್​ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿಲಂಬೂರಿನ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರ ಇಡಲಾಗಿದೆ. ನಾಳೆ (ಸೋಮವಾರ) ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1935ರ ಮೇ 15 ರಂದು ನಿಲಂಬೂರಿನಲ್ಲಿ ಜನಿಸಿದ ಆರ್ಯಾದನ್ ಮುಹಮ್ಮದ್, ಅವರು ಅದೇ ಕ್ಷೇತ್ರದಲ್ಲಿ ಚುನಾವಣೆಗೆ ನಿಂತು ಹಲವು ಬಾರಿ ಗೆಲುವಿನ ನಗೆ ಬೀರಿದ್ದರು. ರೇಡ್ ಯೂನಿಯನ್ ಚಟುವಟಿಕೆಗಳ ಮೂಲಕ ರಾಜಕೀಯ ಪ್ರವೇಶಿಸಿದ ಅವರು, 1952ರಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಯಾದರು. ಕೆಪಿಸಿಸಿಯಲ್ಲಿ ಸದಸ್ಯ, ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. 1977ರಲ್ಲಿ ನಿಲಂಬೂರು ವಿಧಾನಸಭೆ ಕ್ಷೇತ್ರದಿಂದ ಮೊದಲ ಬಾರಿಗೆ ಗೆದ್ದ ಆರ್ಯಾದನ್, 1980, 1987, 1991, 1996, 2001, 2006 ಮತ್ತು 2011ರ ಚುನಾವಣೆಯಲ್ಲೂ ಗೆದ್ದು ಬೀಗಿದ್ದರು. ಒಟ್ಟು 8 ಬಾರಿ ಶಾಸಕರಾಗಿದ್ದರು.ಮೂರು ಬಾರಿ ಸಚಿವರಾಗಿದ್ದ ಆರ್ಯಾದನ್​ ಅವರು ಕಾರ್ಮಿಕ, ಅರಣ್ಯ, ಪ್ರವಾಸೋದ್ಯಮ ಮತ್ತು ಇಂಧನ ಇಲಾಖೆಯ ಜವಾಬ್ದಾರಿ ನಿರ್ವಹಿಸಿದ್ದರು.
ಅಪಘಾತದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿ ಮೃತ್ಯು: ಸಾವಲ್ಲೂ ಸಾರ್ಥಕತೆ ಮೆರೆದ ಪ್ರತಿಭಾವಂತ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 14 =
Remember me
