ನವದೆಹಲಿ:ಮಹಾಮಾರಿ ಕರೊನಾ 3ನೇ ಅಲೆ ಶರವೇಗ ಪಡೆದುಕೊಂಡಿದ್ದು, ರಾಜಕೀಯ, ಸಿನಿಮಾ, ವೈದ್ಯಕೀಯ, ಶಿಕ್ಷಣ ಸೇರಿದಂತೆ ಎಲ್ಲ ರಂಗವನ್ನೂ ಆವರಿಸಿದೆ. ಸೋಂಕಿತರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಕರ್ನಾಟಕ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಬಿಹಾರ ಸಿಎಂ ನಿತೀಶ್​ ಕುಮಾರ್​ ಸೇರಿದಂತೆ ಹಲವು ನಾಯಕರಲ್ಲಿ ಕೋವಿಡ್​ ದೃಢಪಟ್ಟಿದೆ. ಇವರ ಬೆನ್ನಿಗೇ ಇದೀಗ ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರಿಗೂ ಕರೊನಾ ಸೋಂಕು ತಗುಲಿದೆ.
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಅವರಿಗೆ ನಿನ್ನೆ(ಜ.11) ಕರೊನಾ ಪಾಸಿಟಿವ್​ ಇದೆ ವರದಿಯಲ್ಲಿದೆ. ಈ ಬಗ್ಗೆ ಗಡ್ಕರಿ ಅವರೇ ನಿನ್ನೆ ರಾತ್ರಿ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ನನಗೆ ಕರೊನಾ ಸೋಂಕಿನ ಸೌಮ್ಯ ಲಕ್ಷಣಗಳಿದ್ದು, ಸೋಂಕು ದೃಢಪಟ್ಟಿದೆ. ಸದ್ಯ ಮನೆಯಲ್ಲೇ ಕ್ವಾರಂಟೈನ್​ ಆಗಿರುವೆ. ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ಕರೊನಾ ಟೆಸ್ಟ್​ ಮಾಡಿಸಿಕೊಳ್ಳುವ ಜತೆಗೆ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ’ ಎಂದಿದ್ದಾರೆ.
ಗಡ್ಕರಿ ಅವರಿಗೆ ಕಳೆದ ಸೆಪ್ಟಂಬರ್​ನಲ್ಲಿ ಕರೊನಾ ಸೋಂಕು ತಗುಲಿತ್ತು. ಇದೀಗ ಮತ್ತೊಮ್ಮೆ ಸೋಂಕು ತಗುಲಿದೆ.
I have tested positive for Covid 19 today with mild symptoms. Following all the necessary protocols, I have isolated myself and I am under home quarantine. I request all those who have come in contact with me to isolate themselves and get tested.
— Nitin Gadkari (@nitin_gadkari)January 11, 2022

ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ಗೆ ಕರೊನಾ ಪಾಸಿಟಿವ್​, ಐಸಿಯುನಲ್ಲಿ ಚಿಕಿತ್ಸೆ

ಬರೋಬ್ಬರಿ 6 ಅಡಿ ಮೇಲೆದ್ದ ಡುಪ್ಲೆಕ್ಸ್​ ಮನೆ! ಶಿವಮೊಗ್ಗದಲ್ಲಿ 150 ಜಾಕ್​ ಬಳಸಿ ಬಿಹಾರಿ ಕಾರ್ಮಿಕರ ಮ್ಯಾಜಿಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − nine =
Remember me
