ಅಯೋಧ್ಯೆ:ಕೋಟ್ಯಂತರ ಜನರು ಕಾತುರದಿಂದ ಕಾಯುತ್ತಿದ್ದ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯ ಸಂಪನ್ನಗೊಂಡಿದ್ದು, ಬಾಲರಾಮನ ದರ್ಶನ ಪಡೆಯಲು ಭಕ್ತರ ದಂಡೇ ಅಯೋಧ್ಯೆಗೆ ಹರಿದು ಬರುತ್ತಿದೆ. 7 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಾಗರೋಪಾದಿಯಲ್ಲಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.
ಮಂಗಳವಾರ ಒಂದೇ ಅಯೋಧ್ಯೆಗೆ 5 ಲಕ್ಷ ಮಂದಿ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕ್ಷೇತ್ರದಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಉತ್ತರಪ್ರದೇಶ ಸರ್ಕಾರ ತಾತ್ಕಾಲಿಕವಾಗಿ ಬಸ್​ ಸೇವೆಯನ್ನು ಸ್ಥಗಿತಗೊಳಿಸಿ ಆದೇಶಿಸಿದೆ.
ಇದನ್ನೂ ಓದಿ:‘ಕೆಡಿ’ ಲೋಕಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್​ ಬೆಡಗಿ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಯಾರು ದರ್ಶನಕ್ಕಾಗಿ ಆತುರಪಡುವ ಅಗತ್ಯವಿಲ್ಲ. ಎಲ್ಲರಿಗೂ ರಾಮಲಲ್ಲಾನ ದರ್ಶನ ಭಾಗ್ಯ ಸಿಗಲಿದೆ. ವೃದ್ಧರು ಮತ್ತು ದಿವ್ಯಾಂಗರು ಎರಡು ವಾರಗಳ ನಂತರ ಅಯೋಧ್ಯೆಗೆ ಭೇಟಿ ನೀಡಬೇಕೆಂದು ನಾವು ವಿನಂತಿಸಿಕೊಳ್ಳುತ್ತೇವೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಬಸ್​ ಸೇವೆಯನ್ನು ಸ್ಥಹಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿನಿತ್ಯ ಒಂದು ಲಕ್ಷಕ್ಕೂ ಅಧಿಕ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ. ದೇವಾಲಯದ ಹೊರಭಾಗದಲ್ಲಿ ಜನರು ಚಳಿಯನ್ನು ಲೆಕ್ಕಿಸದೆ ಬೆಳಗಿನ ಜಾವ 3 ಗಂಟೆಯಿಂದಲೇ ದೇವಸ್ಥಾನದ ಗೇಟ್​ ಬಳಿ ಕುಳಿತಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಉತ್ತರ ಪ್ರದೇಶ ಪೊಲೀಸ್, ರಾಪಿಡ್ ಆಕ್ಷನ್ ಫೋರ್ಸ್ (RAF), ಮತ್ತು ಸಶಸ್ತ್ರ ಸೀಮಾ ಬಲ್ (SSB)ಯ ಸುಮಾರು 7 ಸಾವಿರ ಸಿಬ್ಬಂದಿಯನ್ನು ದೇವಾಲಯದ ಸುತ್ತ ಭದ್ರೆತೆಗೆ ನಿಯೋಜಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
