ನವದೆಹಲಿ:ನಿನ್ನೆಯಷ್ಟೇ ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಬೆನ್ನಲ್ಲೇ ಅವರ ಪುತ್ರಿ ಪ್ರಿಯಾಂಕಾ ವಾದ್ರಾ ಅವರಿಗೂ ಕರೊನಾ ಸೋಂಕು ತಗುಲಿದೆ.
ಸದ್ಯ ಇಬ್ಬರು ಮನೆಯಲ್ಲೇ ಪ್ರತ್ಯೇಕ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಗೆ ಕರೊನಾ ಪಾಸಿಟಿವ್​ ಬಂದಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೂಡಲೇ ಪರೀಕ್ಷೆಗೊಳಗಾಗಬೇಕೆಂದು ಸ್ವತಃ ಪ್ರಿಯಾಂಕಾ ವಾದ್ರಾ ಅವರೇ ಟ್ವೀಟ್​ ಮೂಲಕ ತಿಳಿಸಿದ್ದಾರೆ.
ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಪರೀಕ್ಷೆಗೊಳಪಟ್ಟಿದೆ. ನನಗೂ ಕರೊನಾ ದೃಢವಾಗಿದ್ದು, ದಯವಿಟ್ಟು ಕೆಲ ದಿನಗಳಿಂದ ನನ್ನನ್ನು ಭೇಟಿಯಾದವರು ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶದ ಲಖನೌನಲ್ಲಿ ಆಯೋಜಿಸಲಾಗಿದ್ದ, ನವ ಸಂಕಲ್ಪ ಯಾತ್ರೆಯಲ್ಲಿ ಪ್ರಿಯಾಂಕಾ ವಾದ್ರಾ ಪಾಲ್ಗೊಂಡಿದ್ದರು.ಅಲ್ಲಿಂದ ದಿಲ್ಲಿಗೆ ವಾಪಸ್ಸಾದ ಬಳಿಕ ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ.(ಏಜೆನ್ಸೀಸ್​)
ಕರೊನಾದಿಂದ ಸೋನಿಯಾ ಗೈರು, ವಿದೇಶಕ್ಕೆ ಹೋದ ರಾಹುಲ್​ ‘ನಾಪತ್ತೆ’? ಮತ್ತೊಮ್ಮೆ ಇಡಿ ಸಮನ್ಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
