ವಿಜಯವಾಡ:ದುಷ್ಕರ್ಮಿಗಳು ಪದವಿ ವಿದ್ಯಾರ್ಥಿನಿಯ ಕೈಕಾಲು ಕಟ್ಟಿ ನಿರ್ಜನ ಪ್ರದೇಶವೊಂದರಲ್ಲಿ ಎಸೆದು ಹೋಗಿರುವ ಆತಂಕಕಾರಿ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ.
ಥೇರ್ಲಂ ಪೊಲೀಸ್​ ಠಾಣೆಯ ಸಮೀಪವಿದ್ದ ನಿರ್ಜನ ಪ್ರದೇಶದಲ್ಲಿ ಪ್ರಜ್ಞೆಯಿಲ್ಲದೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ನೋಡಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು.
ಇದನ್ನೂ ಓದಿರಿ:ಗಂಡನ ಮನೆಯಲ್ಲಿ ನವವಿವಾಹಿತೆ ಆತ್ಮಹತ್ಯೆ! ಮದ್ವೆ ಆದ 2 ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ್ದೇಕೆ?
ಸದ್ಯ ವಿದ್ಯಾರ್ಥಿನಿ ಕೋಮಾದಲ್ಲಿದ್ದು, ಆಕೆಯನ್ನು ಥೇರ್ಲಂ ವಲಯದ ಚಾರ್ಲಾ ಗ್ರಾಮದ ನಿವಾಸಿ ರಮಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ಮಾಹಿತಿಯನ್ನು ಆಕೆಯ ತಂದೆ-ತಾಯಿಗೆ ವಿವರಿಸಲಾಗಿದೆ.
ರಮಾ ವಿಜಯನಗರ ಕಾಲೇಜಿನ ಪದವಿ ವಿದ್ಯಾರ್ಥಿನಿ. ಕೈಕಾಲು ಕಟ್ಟಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಳು. ಈ ಕೃತ್ಯವನ್ನು ಯಾರು ಮಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸದ್ಯ ವಿದ್ಯಾರ್ಥಿನಿ ಕೋಮಾದಲ್ಲಿರುವುದರಿಂದ ಆಕೆ ಎಚ್ಚರಗೊಂಡು ಮಾಹಿತಿ ನೀಡಿದರೆ ಆರೋಪಿಗಳ ಬಂಧನಕ್ಕೆ ಸಹಾಯವಾಗಲಿದೆ.
ಘಟನಾ ಸಂಬಂಧ ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.(ಏಜೆನ್ಸೀಸ್​)
ಗುಜರಾತ್​ ಸ್ಥಳೀಯ ಚುನಾವಣೆಯ ಮತಎಣಿಕೆ: ಭರ್ಜರಿ ಮುನ್ನಡೆ ಸಾಧಿಸಿದ ಬಿಜೆಪಿ, ಕಾಂಗ್ರೆಸ್​ ಕಂಗಾಲು!

ಹಸು ಸಗಣಿ ರಕ್ಷಣೆಗೆ ಸಿಸಿಟಿವಿ, ರಕ್ಷಣಾ ಸಿಬ್ಬಂದಿ ಕಣ್ಗಾವಲು: ಕಾರಣ ಕೇಳಿದ್ರೆ ಹುಬ್ಬೇರಿಸೋದು ಖಂಡಿತ!

ಹುಬ್ಬಳ್ಳಿಯಲ್ಲಿ ರಾಬರ್ಟ್; ಚಪ್ಪಲಿ ಬದಿಗಿಟ್ಟು ಮಾತನಾಡಿದ ದರ್ಶನ್..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + thirteen =
Remember me
