ಹರಿಯಾಣ:ಅನಾರೋಗ್ಯದಿಂದ ಬಳಲುತ್ತಿದ್ದ 7 ವರ್ಷದ ಮಗನ ಚೇತರಿಕೆಗಾಗಿ ಪಾಲಕರು ಆಸ್ಪತ್ರೆ ಬಾಗಿಲಲ್ಲೇ ಕಾಯುತ್ತಿದ್ದರು. ಅತ್ತ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಗು ಸತ್ತಿದೆ ಎಂದು ಘೋಷಿಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದರು. ಗ್ರಾಮದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದಂತೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಕಂದನ ದೇಹಕ್ಕೆ ತಲೆ ಚಚ್ಚಿಕೊಳ್ಳುತ್ತಾ ಕಣ್ಣೀರು ಸುರಿಸುತ್ತಿದ್ದ ತಾಯಿ, ‘ಮಗನೇ ಒಮ್ಮೆ ಕಣ್ಣುಬಿಡಪ್ಪಾ, ನಿನ್ನ ದಮ್ಮಯ್ಯ… ನನ್ನ ಬಿಟ್ಟು ಹೋಗ್ಬೇಡಾ…’ ಎಂದು ಕಂದನ ದೇಹವನ್ನ ಅಲ್ಲಾಡಿಸುತ್ತಾ ಗೋಗರೆಯುತ್ತಿದ್ದಳು… ಆ ದೇವರಿಗೂ ಕರುಳ ಕೂಗು ಕೇಳಿಸಿರಬೇಕು ಅನ್ನಿಸುತ್ತೆ, ಶವವಾಗಿ ಮಲಗಿದ್ದ ಮಗುವಿನ ದೇಹದಲ್ಲಿ ದಿಢೀರ್​ ಚಲನೆ! ಮುಂದಾಗಿದ್ದು ಪವಾಡ…
ಹರಿಯಾಣದ ಜಜ್ಜಾರ್​ ಜಿಲ್ಲೆಯ ಹಿತೇಶ್​ ಎಂಬುವವರ 7 ವರ್ಷದ ಮಗ ಕುನಾಲ್​ ಶರ್ಮಾನಿಗೆ ಕಳೆದ ತಿಂಗಳು ಟೈಫಾಯಿಡ್​ ಜ್ವರ ಕಾಣಿಸಿಕೊಂಡಿತ್ತು. ತೀವ್ರ ಅಸ್ವಸ್ಥನಾಗಿದ್ದ ಕುನಾಲ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 26ರಂದು ಮಗು ಮೃತಪಟ್ಟಿದೆ ಎಂದು ದೆಹಲಿ ವೈದ್ಯರು ಘೋಷಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಸ್ವಗ್ರಾಮಕ್ಕೆ ಮೃತದೇಹ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ದೂರದೂರಲ್ಲಿದ್ದ ಕುನಾಲ್​ನ ಅಜ್ಜಿ, ಮೊಮ್ಮಗನ ಅಂತಿಮ ದರ್ಶನ ಪಡೆಯಬೇಕೆಂದು ಹಠ ಹಿಡಿದಿದ್ದರಿಂದ ಅವರ ಬರುವಿಕೆಗಾಗಿ ಎಲ್ಲರೂ ಕಾಯುತ್ತಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಇದೀಗ ಜೀವಂತವಾಗಿದೆ!
ಕುನಾಲ್ ತಾಯಿ ಅಳ್ಳುತ್ತಾ ಮಗನ ದೇಹದ ಮೇಲೆ ಬಿದ್ದು ಆಕ್ರಂದಿಸುತ್ತಿದ್ದರು. ಎದ್ದೇಳಪ್ಪಾ… ಕಂದಾ… ಅಮ್ಮನ ಮುಖ ನೋಡೋ… ಎಂದು ಮಗನ ದೇಹನ್ನೆಲ್ಲ ಸವರುತ್ತಾ ಎಳೆದಾಡಿದ್ದು, ಆ ವೇಳೆ ಆತನ ದೇಹದಲ್ಲಿ ಚಲನೆ ಕಂಡು ಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಬಾಯಿಗೆ ಬಾಯಿ ಇಟ್ಟು ಉಸಿರು ಕೊಟ್ಟರು. ಆಗ ಮಗನ ದೇಹದಲ್ಲಿ ಮತ್ತಷ್ಟು ಮತ್ತಷ್ಟು ಚಲನ ಕಂಡು ಬಂದಿದ್ದು, ಎದೆಯ ಬಡಿತವೂ ಶುರುವಾಯಿತು. ‘ಡಾಕ್ಟ್ರೇ ಮಗ ಬದುಕಿದ್ದಾನೆ, ಪ್ಲೀಸ್​ ಉಳಿಸಿಕೊಡಿ’ ಎಂದು ಮಗು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋದರು. ಪರೀಕ್ಷಿಸಿದ ವೈದ್ಯರು, ಮಗು ಬದುಕುವ ಸಾಧ್ಯತೆ ಶೇ.15 ಮಾತ್ರ ಎಂದು ಹೇಳಿದರೂ ಪಾಲಕರು ಚಿಕಿತ್ಸೆ ಕೊಡಲು ಹೇಳಿದ್ದರು. 20 ದಿನಗಳ ಕಾಲ ಚಿಕಿತ್ಸೆ ಕೊಟ್ಟಿದ್ದು, ಪವಾಡ ಎಂಬಂತೆ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಮನೆಯಲ್ಲಿ ಆರಾಮಾಗಿದೆ.
ಕಲಬುರಗಿಯಲ್ಲಿ ಪ್ರೇಯಸಿ ಹಂತಕ ರವಿ ಪೂಜಾರಿ ಭೀಕರ ಹತ್ಯೆ!

ಹಿರಿಯ ನಟಿ ಕವಿತಾರ ಮಗ ಕರೊನಾಗೆ ಬಲಿ, ಪತಿಯ ಸ್ಥಿತಿ ಗಂಭೀರ

ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 − two =
Remember me
