ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ಕೇರಳದಿಂದ ಕಾಂಗ್ರೆಸ್‌ಗೆ ಗುಡ್ ನ್ಯೂಸ್; ಭರ್ಜರಿ ಗೆಲುವು ಸಾಧಿಸಿದ ಚಾಂಡಿ ಉಮ್ಮನ್, ಎರಡನೇ ಸ್ಥಾನದಲ್ಲಿ ಸಿಪಿಐ(ಎಂ)
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….
ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಕೆರೆಯ ಒಂದು ಭಾಗ ಮಾತ್ರ ಕಾಣಬಹುದು. ಕೆರೆಯಲ್ಲಿ ಸ್ವಲ್ಪ ಮಾತ್ರವೇ ನೀರು ಇದೆ. ಕೆರೆಯ ಸುತ್ತಲೂ ಮರ, ಹುಲ್ಲು ಹಾಸಿದ್ದು, ಅವುಗಳ ನಡುವೆ ನಾಯಿಯೊಂದು ನಿಂತಿದೆ. ಅದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಫೋಟೋದಲ್ಲಿರುವ ಪ್ರಕೃತಿಯ ಬಣ್ಣಕ್ಕೆ ನಾಯಿಯ ಬಣ್ಣವೂ ಕೂಡ ಬೆರೆತು ಹೋಗಿದ್ದು, ಒಂದೇ ರೀತಿ ಕಾಣುತ್ತದೆ. ಇದರಿಂದ ಮೊದಲ ನೋಟದಲ್ಲಿ ನಾಯಿಯನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ನಾಯಿಯನ್ನು ಗುರುತಿಸಬಹುದು. ನಿಮಗೆ 10 ಸೆಕೆಂಡ ಸಮಯ ಕೊಡಲಾಗುತ್ತದೆ ಅಷ್ಟರಲ್ಲಿ ನೀವು ನಾಯಿಯನ್ನು ಪತ್ತೆಹಚ್ಚಬೇಕು. ನಿಮ್ಮ ಸಮಯ ಈಗ ಶುರು.

12345678910
ಇದನ್ನೂ ಓದಿ:ಗಗನಸಖಿ ಹತ್ಯೆ ಪ್ರಕರಣ; ಪೊಲೀಸ್​ ಲಾಕಪ್​ನಲ್ಲಿ ಆರೋಪಿ ಆತ್ಮಹತ್ಯೆನಿಮ್ಮ ಸಮಯ ಮುಗಿಯಿತು. 10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಶ್ವಾನವನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಗುರುತಿಸಲು ಸಾಧ್ಯವಾಗದೇ ಎಲ್ಲಿದೆ ಎಂದು ಹುಡುಕುತ್ತಿದ್ದರೆ, ಈ ಕೆಳಗಿನ ಫೋಟೋ ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಗಗನಸಖಿ ಹತ್ಯೆ ಪ್ರಕರಣ; ಪೊಲೀಸ್​ ಲಾಕಪ್​ನಲ್ಲಿ ಆರೋಪಿ ಆತ್ಮಹತ್ಯೆ

ಕೃಷ್ಣ ಜನ್ಮಾಷ್ಟಮಿಗೆ 88 ಬಗೆಯ ಖಾದ್ಯ ತಯಾರಿಸಿದ ಮಹಿಳೆ!

ಬೆಳ್ಳಿ ಪಾತ್ರೆಗಳು ಪಳಪಳ ಎಂದು ಹೊಳೆಯ ಬೇಕಾ? ಈ ಸಲಹೆ ಫಾಲೋ ಮಾಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 2 =
Remember me
