ತಿರುವನಂತಪುರಂ:ಸೋಮವಾರ ತಡರಾತ್ರಿ ಮನೆಯೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ, 8 ತಿಂಗಳ ಮಗು ಸೇರಿ ಐವರು ಸಜೀವ ದಹನಗೊಂಡಿದ್ದಾರೆ.
ಇಂತಹ ಧಾರುಣ ಘಟನೆ ಕೇರಳದ ದವಳಪುರಂನಲ್ಲಿ ಸಂಭವಿಸಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮನೆ ಮಾಲೀಕ ಪ್ರತಾ​ಪನ್ (64), ಇವರ ಪತ್ನಿ ಶೇರ್ಲಿ(53), ಕಿರಿಯ ಮಗ ಅಖಿಲ್(25), ಹಿರಿಯ ಮಗನ ಪತ್ನಿ ಅಭಿರಾಮಿ(24) ಮತ್ತು 8 ತಿಂಗಳ ಮೊಮ್ಮಗ ರಾಯನ್ ಮಲಗಿದ್ದಲ್ಲೇ ಸುಟ್ಟುಕರಕಲಾಗಿದ್ದಾರೆ. ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ನಿಖಿಲ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಮನೆಯ ಹೊರಗೆ ನಿಲ್ಲಿಸಿದ್ದ ಐದು ಬೈಕ್‌ಗಳು ಸುಟ್ಟು ಕರಕಲಾಗಿವೆ.
ಮನೆಯಿಂದ ಹೊರ ಬರುತ್ತಿದ್ದ ದಟ್ಟ ಹೊಗೆಯನ್ನ ನೋಡಿ ಭಯಗೊಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದರಾದರೂ ಅಷ್ಟರಲ್ಲಿ ಮನೆಯಲ್ಲಿ ಐವರು ಸುಟ್ಟುಕರಕಲಾಗಿದ್ದರು. ಮನೆಯ ಬಹುತೇಕ ಭಾಗ ಬೆಂಕಿಗೆ ಆಹುತಿಯಾಗಿದೆ. ಈ ದುರಂತಕ್ಕೆ ಕಾರಣ ಏನೆಂದು ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ, ಆದರೆ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಬೆಕ್ಕು ಕಚ್ಚಿ ಮಹಿಳೆಯರಿಬ್ಬರು ಸಾವು! ಮೃತರಲ್ಲಿ ಒಬ್ಬಾಕೆ ವೈದ್ಯನ ಪತ್ನಿ… ಬೆಚ್ಚಿಬೀಳಿಸುತ್ತೆ ಈ ಸ್ಟೋರಿ

ಬೆಕ್ಕು ಕಚ್ಚಿ ಮಹಿಳೆಯರಿಬ್ಬರು ಸಾವು! ಮೃತರಲ್ಲಿ ಒಬ್ಬಾಕೆ ವೈದ್ಯನ ಪತ್ನಿ… ಬೆಚ್ಚಿಬೀಳಿಸುತ್ತೆ ಈ ಸ್ಟೋರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 5 =
Remember me
