ಚೆನ್ನೈ:ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಪ್ರಯತ್ನಿಸಿದ ಗ್ಯಾಂಗ್​ ಒಂದಕ್ಕೆ ಎಟಿಎಂ ಒಡೆಯಲು ಆಗದ ಹಿನ್ನೆಲೆಯಲ್ಲಿ ಎಟಿಎಂ ಮಷಿನ್​ ಅನ್ನೇ ಹೊತ್ತೊಯ್ದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಮಿಳುನಾಡಿನ ತಿರುಪ್ಪೂರಿನ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ಇಂತಹ ಘಟನೆ ನಡೆದಿದೆ. ಭಾನುವಾರ ಮುಂಜಾನೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಮುಖವಾಡ ಧರಿಸಿದ್ದ ನಾಲ್ವರು ಎಟಿಎಂ ಒಳಗೆ ನುಗ್ಗಿದ್ದಾರೆ. ಅಲ್ಲಿದ್ದ ಎಟಿಎಂ ಮಷಿನ್​ನಿಂದ ಹಣವನ್ನು ಹೊರ ತೆಗೆಯಲು ಪ್ರಯತ್ನಿಸಿದ್ದಾರೆ. ಅದು ಆಗದಿದ್ದಾಗ ಮಷಿನ್​ನನ್ನೇ ಎತ್ತಿಕೊಂಡು ಹೊರನಡೆದಿದ್ದಾರೆ. ಅದನ್ನು ಗಾಡಿಯೊಳಗೆ ಇಟ್ಟುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.
ಬೆಳಗ್ಗೆ ಎಟಿಎಂನಿಂದ ಹಣ ತೆಗೆಯಲು ಬಂದ ಜನರಿಗೆ ಎಟಿಎಂ ಬಾಗಿಲು ಒಡೆದಿರುವುದು ಕಂಡಿದೆ. ಅಲ್ಲಿದ್ದ ಮಷಿನ್​ ಇಲ್ಲದಿದ್ದನ್ನು ಕಂಡು ಗಾಬರಿಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಕಳೆದ ಎರಡು ವರ್ಷಗಳಿಂದ ರಾತ್ರಿ ಪಾಳೆಯಲ್ಲಿ ಯಾರೊಬ್ಬರೂ ಎಟಿಎಂಗೆ ಭದ್ರತೆ ನೀಡುತ್ತಿಲ್ಲ. ಹಾಗಾಗಿಯೇ ಈ ಕೃತ್ಯ ನಡೆಯುವಂತಾಗಿದೆ ಎಂದು ಬ್ಯಾಂಕ್​ ಆರೋಪಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ಆರಂಭಿಸಿದ್ದಾರೆ. (ಏಜೆನ್ಸೀಸ್​)

ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಇಂದಿರಾ ಗಾಂಧಿ ಕುಟುಂಬದ ಕುಡಿಗೆ ಟೀ ಎಸ್ಟೇಟ್​ನಲ್ಲಿ ಕೆಲಸ! ವೈರಲ್​ ಆಯ್ತು ಪ್ರಿಯಾಂಕಾ ವಿಡಿಯೋ

ಬೀಚ್​ನಲ್ಲಿ ವಾಕಿಂಗ್​ ಮಾಡುವಾಗ ಸಿಕ್ಕ ನಿಗೂಢ ವಸ್ತುವಿನಿಂದ ಮಹಿಳೆಗೆ ಖುಲಾಯಿಸಿತು ಅದೃಷ್ಟ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × one =
Remember me
