ಪಾಲಕ್ಕಾಡ್ (ಕೇರಳ):10 ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವತಿ ಕೇಸ್​ಗೆ ರೋಚಕ ತಿರುವು ಸಿಕ್ಕಿದೆ. ಈಕೆಯನ್ನ ಪ್ರಿಯಕರನೇ ತನ್ನ ಮನೆಯಲ್ಲಿ ಯಾರಿಗೂ ತಿಳಿಯದಂತೆ ದಶಕ ಕಾಲ ಅಡಗಿಸಿಟ್ಟಿದ್ದ! ಆ ಮನೆಯಲ್ಲಿದ್ದ ಕುಟುಂಬಸ್ಥರಿಗೂ ಮಗನ ಪ್ರೇಯಸಿ ತಮ್ಮ ಮನೆಯಲ್ಲಿರೋದು ಗೊತ್ತೇ ಇರಲಿಲ್ಲ. ನೆರೆಹೊರೆಯವರಿಗೂ ಒಂದು ಸಣ್ಣ ಸುಳಿವೂ ಸಿಕ್ಕಿರಲಿಲ್ಲ. ಆದರೆ ಇದೀಗ ಆ ಕೋಣೆಯ ರಹಸ್ಯ ಬಯಲಾಗಿದ್ದು, ಅವರ ಪ್ರೇಮ್​ ಕಹಾನಿ ಕೇಳಿದ್ರೆ ಶಾಕ್​ ಆಗ್ತೀರಿ.
ಕೇರಳದ ಪಾಲಕ್ಕಾಡ್ ಜಿಲ್ಲೆಯ ಅರಿಯೂರು ಸಮೀಪದ ಕರೈಕ್ಕಟ್ಟುಪರಂಬು ಗ್ರಾಮದಲ್ಲಿ 2010ರ ಫೆಬ್ರವರಿ 2ರಂದು 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿದ್ದಳು. ಮಗಳಿಗಾಗಿ ಈಕೆಯ ಪಾಲಕರು ಹುಡುಕಿದ ಜಾಗವಿಲ್ಲ. ಪೊಲೀಸ್​ ಠಾಣೆಯಲ್ಲಿ ಯುವತಿ ನಾಪತ್ತೆ ಕೇಸ್​ ಕೂಡ ದಾಖಲಾಗಿತ್ತು. ಪೊಲೀಸರು ಹುಡುಕಾಡಿದರೂ ಪತ್ತೆಯಾಗಲಿಲ್ಲ.
ಆದರೆ, ಆ ಯುವತಿ ಅದೇ ಗ್ರಾಮದ ತನ್ನ ಪ್ರಿಯಕರನ ಮನೆಯಲ್ಲೇ ಇದ್ದಳು. ಅಂದು ನಾಪತ್ತೆಯಾಗಿದ್ದ ಯುವತಿಯನ್ನ ಪ್ರಿಯಕರ ತನ್ನ ಮನೆಯ ಕೋಣೆಯೊಂದರಲ್ಲಿ ಅಡಗಿಸಿಟ್ಟಿದ್ದ. ಯುವತಿ ಮತ್ತು ಯುವಕನ ಮನೆ ಕೇವಲ 100 ಮೀಟರ್​ ಅಂತರದಲ್ಲಿದ್ದರೂ ಯಾರೊಬ್ಬರಿಗೂ 10 ವರ್ಷ ಕಾಲ ಗೊತ್ತೇ ಆಗಿಲ್ಲ. ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ ವೇಳೆ ಕೋಣೆಯ ಕಿಟಕಿ ಮೂಲಕ ಯುವತಿಯನ್ನ ಸ್ನಾನಗೃಹ, ಶೌಚಗೃಹಕ್ಕೆ ಕರೆದೊಯ್ಯುತ್ತಿದ್ದ. ತಾನು ಕೋಣೆಯಲ್ಲೇ ಊಟ ಮಾಡುವೆ ಎಂದು ತಟ್ಟೆಗೆ ಊಟ ಹಾಕಿಕೊಂಡು ಹೋಗುತ್ತಿದ್ದವ ತನ್ನ ಪ್ರೇಯಸಿಗೆ ಕೊಡುತ್ತಿದ್ದ. ತನ್ನ ಕೋಣೆಯೊಳಗೆ ಯಾರಿಗೂ ಪ್ರವೇಶ ನೀಡುತ್ತಿರಲಿಲ್ಲ. ಮನೆಯವರು ಏಕೆ? ಏನು ಪ್ರಶ್ನಿಸುವುದನ್ನು ತಪ್ಪಿಸಲು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಹಾಗಾಗಿ ಮನೆಯವರೂ ಅವನತ್ತ ಹೆಚ್ಚು ಸುಳಿಯುತ್ತಿರಲಿಲ್ಲ. ಕೆಲಸಕ್ಕೆ ಹೋದವ ಬೇಗ ಮನೆಗೆ ಬಂದು ಕೋಣೆ ಸೇರಿಕೊಳ್ಳುತ್ತಿದ್ದ. ಪ್ರೇಯಸಿಯೊಂದಿಗೆ ಕಾಲ ಕಳೆಯುತ್ತಿದ್ದ. ಹೀಗೆ ರಹಸ್ಯ ಕೋಣೆಯಲ್ಲಿ ನಡೆಯುತ್ತಿದ್ದ ಇವರಿಬ್ಬರ ಪ್ರೇಮ್​ಕಹಾನಿ ಬಯಲಾಗಿದ್ದೇ ರೋಚಕ.
ಮೂರು ತಿಂಗಳ ಹಿಂದಷ್ಟೆ ಯುವಕ ನಾಪತ್ತೆಯಾಗಿದ್ದ. ಆತಂಕಗೊಂಡ ಪಾಲಕರು ಪೊಲೀಸ್​ ಠಾಣೆಗೆ ದೂರು ಕೊಟ್ಟಿದ್ದರು. ಇತ್ತೀಚಿಗೆ ಯುವಕ ತನ್ನ ಸಹೋದರನ ಕಣ್ಣಿಗೆ ಬಿದ್ದಿದ್ದ. ಪೊಲೀಸರಿಗೆ ಈ ವಿಷಯ ಗೊತ್ತಾಗುತ್ತಿದ್ದಂತೆ ಯುವಕನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದಾಗ ಗೊತ್ತಾಯ್ತು ಪ್ರೇಯಸಿಯನ್ನ ದಶಕ ಕಾಲ ರಹಸ್ಯವಾಗಿ ಕೋಣೆಯಲ್ಲೇ ಇಟ್ಟದ್ದು ಏಕೆಂದು.
ಒಂದೇ ಗ್ರಾಮದ ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡಿಕೊಳ್ಳಲು ಜಾತಿ ಅಡ್ಡ ಬರಲಿದೆ, ಮನೆಯವರು ಒಪ್ಪುವುದಿಲ್ಲ. ಎಲ್ಲಿಯಾದರೂ ಓಡಿಹೋಗೋಣ ಅಂದ್ರೆ ಹಣವಿಲ್ಲ ಎಂದು ಯೋಚಿಸಿದ ಪ್ರೇಮಿಗಳು ರಹಸ್ಯ ಕೋಣೆಯಲ್ಲೇ ಬಚ್ಚಿಟ್ಟುಕೊಂಡು ಲವ್​ ಕಹಾನಿ ಮುಂದುವರಿಸಿದ್ದರಂತೆ. ಇತ್ತೀಚಿಗೆ ರಾತ್ರಿ ವೇಳೆ ಆಕೆಯನ್ನ ಮನೆಯಿಂದ ಹೊರ ಕರೆದೊಯ್ದು ಮದುವೆ ಮಾಡಿಕೊಂಡು ವಿಥಾನಸ್ಸೆರಿ ಗ್ರಾಮದಲ್ಲಿ ವಾಸವಿದ್ದ. ಇನ್ನು ರಹಸ್ಯ ಕೋಣೆಯ ಕಿಟಕಿ ಮೂಲಕ ಯುವತಿ ತನ್ನ ತಂದೆ-ತಾಯಿಯನ್ನ ಎರಡ್ಮೂರು ಬಾರಿ ನೋಡಿದ್ದರೂ ಮಾತನಾಡಿಸುವ ಗೋಜಿಗೆ ಹೋಗಿರಲಿಲ್ಲವಂತೆ… ಇವರಿಬ್ಬರ ಪ್ರೇಮ್​ ಕಹಾನಿ ಕೇಳಿದ ಪೊಲೀಸರು ಅರೆಕ್ಷಣ ದಂಗಾಗಿದ್ದಾರೆ.
ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ರೋಹಿಣಿ ಸಿಂಧೂರಿ ವಿರುದ್ಧ ನಡೆದಿತ್ತು ಭಾರೀ ಷಡ್ಯಂತ್ರ! ಮತ್ತೊಂದು ಆಡಿಯೋ ವೈರಲ್​, ಅದರಲ್ಲಿದೆ ಇಬ್ಬರ ಹೆಸರು

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 12 =
Remember me
