ನಾಗ್ಪುರ:ಯೂಟ್ಯೂಬ್​ ವಿಡಿಯೋ ನೆರವಿನಿಂದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆಘಾತಕಾರಿ ಸಂಗತಿ ಏನೆಂದರೆ, ಜನ್ಮ ನೀಡಿದ ಮಗುವನ್ನು ಬಾಲಕಿ ಉಸಿರುಗಟ್ಟಿಸಿ ಮಾಡಿದ್ದಾಳೆ.
ಪೊಲೀಸರ ಪ್ರಕಾರ ಮಹಾರಾಷ್ಟ್ರದ ನಾಗ್ಪುರದ ಅಂಬಾಜಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದೇ ತಿಂಗಳ 2 ರಂದು ಈ ಘಟನೆ ನಡೆದಿದೆ. 9ನೇ ತರಗತಿಯಲ್ಲಿ ಓದುತ್ತಿರುವ 15 ವರ್ಷದ ಬಾಲಕಿಯೊಬ್ಬಳು ಯುವಕನಿಂದ ಗರ್ಭಿಣಿಯಾಗಿದ್ದಳು. ಈ ವಿಷಯವನ್ನು ಮನೆಯವರಿಗೆ ಗೊತ್ತಾಗದಂತೆ ಬಚ್ಚಿಟ್ಟಿದ್ದಳು. ಹೊಟ್ಟೆ ಉಬ್ಬರಿಸಿಕೊಂಡು ಬರುತ್ತಿರುವುದನ್ನು ಗಮನಿಸಿದ ತಾಯಿ ಹಲವು ಬಾರಿ ವಿಚಾರಿಸಿದಾಗ ಆರೋಗ್ಯ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಳು. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇನೆ ಎಂದು ತಾಯಿ ಹೇಳಿದರೂ ಗುಣವಾಗುತ್ತದೆ ಎಂದು ನಿರ್ಲಕ್ಷಿಸಿದ್ದಳು. ಹೀಗಿರುವಾಗ ಮಾರ್ಚ್ 2 ರಂದು ತಾಯಿ ಕೆಲಸ ನಿಮಿತ್ತ ಮನೆಯಿಂದ ಹೊರಗೆ ಹೋದಾಗ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಇದನ್ನೂ ಓದಿ:H3N2 ಸೋಂಕಿಗೆ ಗಾಬರಿ ಪಡೆಬೇಕಾಗಿಲ್ಲ; ಮುಂಜಾಗ್ರತೆ ಕಡ್ಡಾಯ, ಎಚ್ಚರಿಕೆ ಸೂಚನೆಗಳನ್ನು ನೀಡಿದ ಸುಧಾಕರ್​​
ಹೆರಿಗೆ ನೋವು ಕಾಣಿಸಿಕೊಂಡಾಗ ಬಾಲಕಿ ಯೂಟ್ಯೂಬ್ ನೋಡಿ ತಾನೇ ಹೆರಿಗೆ ಮಾಡಿದ್ದಾಳೆ. ಬಳಿಕ ಹುಟ್ಟಿದ ಹೆಣ್ಣು ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾಳೆ. ಮಗುವಿನ ಮೃತದೇಹವನ್ನು ಪೆಟ್ಟಿಗೆಯಲ್ಲಿಟ್ಟು ಮನೆಯ ಮೂಲೆಯೊಂದರಲ್ಲಿ ಬಚ್ಚಿಟ್ಟಿದ್ದಳು. ಬಳಿಕ ತೀವ್ರ ರಕ್ತಸ್ರಾವವಾಗಿ ಮನೆಯಲ್ಲಿ ಪ್ರಜ್ಞಾಹೀನಳಾಗಿ ಬಾಲಕ ಬಿದ್ದಿದ್ದಳು. ತಾಯಿ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ಬಂದಿದ್ದು, ಮನೆಯಲ್ಲಿ ರಕ್ತದ ಕಲೆಗಳಿದ್ದು ಬಾಲಕಿ ತೀವ್ರ ಅಸ್ವಸ್ಥಳಾಗಿರುವುದನ್ನು ನೋಡಿ ಏನಾಯಿತು ಎಂದು ಕೇಳಿದ್ದಾಳೆ. ಘಟನೆಯ ಬಗ್ಗೆ ಬಾಲಕಿ ತನ್ನ ತಾಯಿಗೆ ತಿಳಿಸಿದ್ದಾಳೆ. ಕೂಡಲೇ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕ ಕೆಲವು ತಿಂಗಳ ಹಿಂದೆ ಇನ್​ಸ್ಟಾಗ್ರಾಂನಲ್ಲಿ ಭೇಟಿಯಾಗಿದ್ದಾನೆ. ಆತನ ಹೆಸರು ಏಕ್ ಠಾಕೂರ್. ಬಾಲಕಿಯೊಂದಿಗೆ ಚಾಟ್ ಮಾಡಲು ಆರಂಭಿಸಿದ್ದಾರೆ. ನಂತರ ಇಬ್ಬರಿಗೂ ಪರಸ್ಪರ ಪ್ರೀತಿ ಬೆಳೆಯಿತು. ಈ ಕ್ರಮದಲ್ಲಿ ಇಬ್ಬರೂ ಒಂಬತ್ತು ತಿಂಗಳ ಹಿಂದೆ ಭೇಟಿಯಾಗಿದ್ದರು. ಯುವಕ ಬಾಲಕಿಯನ್ನು ತನ್ನ ಸ್ನೇಹಿತನ ಕೋಣೆಗೆ ಕರೆದೊಯ್ದು ಕೂಲ್ ಡ್ರಿಂಕ್​ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಾಳೆ.
ಮನೆಯಲ್ಲಿ ಗರ್ಭಿಣಿಯಾಗಿರುವ ವಿಚಾರ ತಿಳಿಯದಂತೆ ಎಚ್ಚರ ವಹಿಸಿದ್ದ ಬಾಲಕಿ ಮಾ.2ರಂದು ಯೂಟ್ಯೂಬ್ ನೋಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕಿಯನ್ನು ಗರ್ಭವತಿ ಮಾಡಿದ ಯುವಕನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.(ಏಜೆನ್ಸೀಸ್​)
ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದ ಮೇಲೆ ಸಿಬಿಐ ದಾಳಿ

ಕೋಲಾರ | ಪತ್ನಿಯನ್ನು ಹತ್ಯೆಗೈದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ!

ಬೀದಿ ನಾಯಿ ಸಮಸ್ಯೆಗೆ ಪರಿಹಾರ: ಬೀದಿ ಬದಿಯ ಶ್ವಾನಗಳನ್ನು ಸೇವನೆಗಾಗಿ ಅಸ್ಸಾಂಗೆ ಕಳುಹಿಸಿ ಎಂದ ಶಾಸಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
