ಗುಜರಾತ್​:ಚುನಾವಣೆ ಸಮೀಪಿಸುತ್ತಿದ್ದಂತೆ ಇಲ್ಲಿನ ರಾಜ್ಯ ರಾಜಕೀಯದಲ್ಲಿ ಬುಧವಾರ ಮಹತ್ತರ ಬೆಳವಣಿಗೆಯಾಗಿದೆ. ಗುಜರಾತ್​ನ​​ ಪ್ರಭಾವಿ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್​ನಿಂದ ಹೊರಬಂದಿದ್ದಾರೆ.
ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಾರ್ದಿಕ್​ ಪಟೇಲ್​, ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು, ಮಿತ್ರರು, ರಾಜ್ಯದ ಜನತೆ ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ. ಗುಜರಾತ್​ಗಾಗಿ ನನ್ನ ಮುಂದಿನ ನಡೆ ಇರಲಿದೆ ಎಂದು ಟ್ವೀಟ್​ ಮಾಡಿದ್ದಾರೆ.
आज मैं हिम्मत करके कांग्रेस पार्टी के पद और पार्टी की प्राथमिक सदस्यता से इस्तीफा देता हूँ। मुझे विश्वास है कि मेरे इस निर्णय का स्वागत मेरा हर साथी और गुजरात की जनता करेगी। मैं मानता हूं कि मेरे इस कदम के बाद मैं भविष्य में गुजरात के लिए सच में सकारात्मक रूप से कार्य कर पाऊँगा।pic.twitter.com/MG32gjrMiY
— Hardik Patel (@HardikPatel_)May 18, 2022

28 ವರ್ಷದ ಹಾರ್ದಿಕ್ ಪಟೇಲ್​, 2015ರಲ್ಲಿ ಗುಜರಾತ್​ನಲ್ಲಿ ಪಟೇಲ್ ಸಮುದಾಯದ ಮೀಸಲಾತಿ ಚಳವಳಿ ಮುನ್ನಡೆಸುವ ಮೂಲಕ ಮುನ್ನೆಲೆಗೆ ಬಂದಿದ್ದರು. 2019ರಲ್ಲಿ ಕಾಂಗ್ರೆಸ್​ನ ರಾಷ್ಟ್ರನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದರು. ಪ್ರಭಾವಿ ಯುವ ನಾಯಕ ಎಂದೇ ಗುರುತಿಸಿಕೊಂಡಿದ್ದ ಹಾರ್ದಿಕ್​, ಕಾಂಗ್ರೆಸ್​ ತೊರೆದಿದ್ದು, ಪಕ್ಷಕ್ಕೆ ಪೆಟ್ಟು ಆಗಿದ್ದಂತೂ ನಿಜ. ಹಾರ್ದಿಕ್ ಯಾವ ಪಕ್ಷಕ್ಕೆ ಸೇರ್ತಾರೆ ಎಂಬುದು ಇನ್ನೂ ಗೊತ್ತಾಗಿಲ್ಲ.
ಮೈಸೂರಲ್ಲಿ ವಿಕೃತ ಕಾಮಿ: ಈತನ ಗಾಳಕ್ಕೆ ಬಿದ್ದ ಯುವತಿಯರ ಪಾಡು ಹೇಳತೀರದು… ಮೊಬೈಲ್​ ನೋಡಿ ಬೆಚ್ಚಿಬಿದ್ದ ಪೊಲೀಸರು

ವಾಕಿಂಗ್​ ವೇಳೆ ಅಪಘಾತ: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಸಾವು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 − seven =
Remember me
