ಬೆಂಗಳೂರು:ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ, ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ. ಮಾನವೀಯತೆ ಸತ್ತರಷ್ಟೇ ಕೋಮುವಾದ ವಿಜೃಂಭಿಸುತ್ತದೆ. ದರ್ಪ ಹೆಚ್ಚಿದಷ್ಟೂ ಧರ್ಮಗಳೂ ಅಳಿಯುತ್ತವೆ. ಕನ್ಹಯ್ಯ ಅವರ ಕೊಲೆ ಇಂಥ ದರ್ಪವನ್ನು ನಾಮಾವಶೇಷ ಮಾಡಲಿ. ಕನ್ಹಯ್ಯ ಅವರಿಗಾಗಿ ಇಡೀ ಭಾರತ ಕಣ್ಣೀರಿಡುತ್ತಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಪ್ರವಾದಿ ಮುಹಮ್ಮದ್​ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾರನ್ನು ಬೆಂಬಲಿಸಿ, ಪೋಸ್ಟ್​ ಹಾಕಿದ್ದ ಹಿಂದು ವ್ಯಕ್ತಿ ಟೈಲರ್ ಕನ್ಹಯ್ಯ ಎಂಬಾತನನ್ನು ರಾಜಸ್ಥಾನದ ಉದಯಪುರದಲ್ಲಿ ಕಿಡಿಗೇಡಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹೇಯ ಕೃತ್ಯವನ್ನ ಖಂಡಿಸಿರುವ ಎಚ್​ಡಿಕೆ, ಉದಯಪುರದ ಟೈಲರ್ ಹತ್ಯೆ ಪ್ರಕರಣ ಅತ್ಯಂತ ಖಂಡನೀಯ. ಕನ್ಹಯ್ಯ ಅವರ ಸಾವು, ‘ಕೊಂದು ವಿಜೃಂಭಿಸುವ ಕಿರಾತಕ ಮನಃಸ್ಥಿತಿಯನ್ನು ಬದಲಿಸಲಿ’. ಅವರ ಕುಟುಂಬದ ಜತೆ ನಾವೆಲ್ಲರೂ ನಿಲ್ಲೋಣ ಎಂದಿದ್ದಾರೆ.
ರಾಜಸ್ಥಾನದಲ್ಲಿ ಮುಗ್ಧ ಟೈಲರ್ ಶಿರಚ್ಛೇದ ಮಾಡಿರುವ ಘಟನೆ ನನಗೆ ತೀವ್ರ ಘಾಸಿ ಉಂಟು ಮಾಡಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೈಶಾಚಿಕ ಕೃತ್ಯ. ಹಿಂಸೆ ಯಾವುದಕ್ಕೂ ಉತ್ತರವಲ್ಲ, ಪರಿಹಾರವೂ ಅಲ್ಲ. ಯಾವ ಧರ್ಮವೂ ಹಿಂಸೆಯನ್ನು ಒಪ್ಪುವುದೂ ಇಲ್ಲ. ಕನ್ಹಯ್ಯ ಅವರನ್ನು ಕೊಂದ ವ್ಯಕ್ತಿಗಳು ಆ ಸಮಾಜಕ್ಕೂ ದೊಡ್ಡ ಮಟ್ಟದಲ್ಲಿ ತೊಂದರೆ ಕೊಡುವ ವ್ಯಕ್ತಿಗಳು. ಸಮಾಜ ಹಾಳು ಮಾಡುವ ಅವರನ್ನ ಬಂಧಿಸಿದ್ದಾರೆ. ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಎಚ್​ಡಿಕೆ ಆಗ್ರಹಿಸಿದ್ದಾರೆ.
ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ, ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ. ಮಾನವೀಯತೆ ಸತ್ತರಷ್ಟೇ ಕೋಮುವಾದ ವಿಜೃಂಭಿಸುತ್ತದೆ. ದರ್ಪ ಹೆಚ್ಚಿದಷ್ಟೂ ಧರ್ಮಗಳೂ ಅಳಿಯುತ್ತವೆ. ಕನ್ಹಯ್ಯ ಅವರ ಕೊಲೆ ಇಂಥ ದರ್ಪವನ್ನು ನಾಮಾವಶೇಷ ಮಾಡಲಿ. 3/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)June 29, 2022

ಕಾನೂನಿನಲ್ಲಿ ತಪ್ಪು ಮಾಡಿದ್ರು ಹೊರಗೆ ಬರುವ ಸಾಧ್ಯತೆ ಇದೆ. ಇದರಲ್ಲಿ ಯಾವುದೇ ಸಂಘಟನೆ ಇರಲಿ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮತ್ತು ಇಂತಹ ಘಟನೆ ಆಗುವ ಮೊದಲೇ ಅದನ್ನ ಗಮನಿಸಿ ಪೋಲಿಸರು ತಡೆಯಬೇಕು. ದೇಶದ ಎಲ್ಲ ಸಿಎಂಗಳು ಮತ್ತು ಪೊಲೀಸ್​ ಅಧಿಕಾರಿಗಳು ಪ್ರತಿ ಪೊಲೀಸ್​ ಠಾಣೆಗೂ ಈ ಬಗ್ಗೆ ಸೂಚನೆ ನೀಡಬೇಕು. ಅಪರಾಧ ನಡೆಯುವ ಮೊದಲೇ ಅವರನ್ನ ಬಂಧಿಸಬೇಕು, ಇಂತಹವರಿಗೆ ಬೆಂಬಲ ನೀಡುವ ಸಂಘಟನೆಯವರನ್ನು ಮೊದಲು ಹಿಡಿಯಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಬ್ರದರ್ ಬ್ರದರ್… ಎನ್ನುವ ಕೈ ನಾಯಕ ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಕನ್ಹಯ್ಯ ಹತ್ಯೆ ಖಂಡಿಸಿ ಪ್ರತಾಪ್​​ ಸಿಂಹ ತರಾಟೆ

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
