ನವದೆಹಲಿ:ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿದ್ದು, ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.
ಶುಕ್ರವಾರ ಮಧ್ಯಾಹ್ನ 3ಕ್ಕೆ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್​ ಕುಮಾರ್​, ಹಿಮಾಚಲ ಪ್ರದೇಶದ 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನ.12ರಂದು ಮತದಾನ ನಡೆಯಲಿದೆ. ಡಿ.8ರಂದು ಮತ ಎಣಿಕೆ ನಡೆಯಲಿದೆ ಎಂದು ಘೋಷಿಸಿದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ ಎಂದರು.
ಗುಜರಾತ್ ಅಸೆಂಬ್ಲಿಯ ಅವಧಿಯು 2023ರ ಫೆಬ್ರವರಿ 18ಕ್ಕೆ ಕೊನೆಗೊಳ್ಳುತ್ತದೆ. ಹಿಮಾಚಲ ಪ್ರದೇಶ ಸದನದ ಅವಧಿಯು 2023ರ ಜನವರಿ 8ಕ್ಕೆ ಮುಗಿಯಲಿದೆ. ಹಾಗಾಗಿ ಈ ಎರಡೂ ರಾಜ್ಯಗಳಿಗೆ ಇಂದೇ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಕೇಂದ್ರ ಚುನಾವಣಾ ಆಯೋಗವು ಇಂದು ಹಿಮಾಚಲ ಪ್ರದೇಶಕ್ಕೆ ಮಾತ್ರ ಚುನಾವಣೆ ದಿನಾಂಕ ಘೋಷಿಸಿದೆ. ಈ ವರ್ಷದ ಕೊನೆಯಲ್ಲಿ ಗುಜರಾತ್​ ರಾಜ್ಯಕ್ಕೂ ಚುನಾವಣೆ ನಡೆಯಬೇಕಿದ್ದು, ಶೀಘ್ರವೇ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
ಗುಜರಾತ್​ ವಿಧಾನಸಭೆಯು 182 ಸ್ಥಾನಗಳನ್ನು ಹೊಂದಿದ್ದು, ಬಹುಮತ ಪಡೆಯಲು 92 ಸ್ಥಾನ ಅಗತ್ಯ. ಹಿಮಾಚಲಪ್ರದೇಶ ವಿಧಾನಸಭೆಯು 68 ಕ್ಷೇತ್ರಗಳನ್ನ ಹೊಂದಿದ್ದು, ಬಹುಮತ ಪಡೆಯಲು 35 ಸ್ಥಾನ ಅಗತ್ಯ. ಸದ್ಯ ಎರಡೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ.
ಜ್ಞಾನವಾಪಿಯಲ್ಲಿ ಶಿವಲಿಂಗ ಪತ್ತೆ: ವೈಜ್ಞಾನಿಕ ಅಧ್ಯಯನ ನಡೆಸದಂತೆ ವಾರಣಾಸಿ ಕೋರ್ಟ್​ ಆದೇಶ

‘ಕಾಂತಾರ’ ನೋಡಿ ರಿಷಬ್​ರ ಕಾಲಿಗೆ ಬಿದ್ದ ಯುಟ್ಯೂಬರ್​! ಸಖತ್​ ವೈರಲ್​ ಆಗ್ತಿದೆ ಈ ವಿಡಿಯೋ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
