ಕುಲ್ಗಾಮ್​:ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯಲ್ಲಿ ಉಗ್ರರು ಹಿಂದೂ ಶಾಲೆಯ ಶಿಕ್ಷಕಿಯೊಬ್ಬರನ್ನು ಮಂಗಳವಾರ ಗುಂಡಿಕ್ಕಿ ಕೊಂದಿದ್ದಾರೆ.
ಜಮ್ಮು ಪ್ರದೇಶದ ಸಾಂಬಾದ ರಜನಿ ಬಾಲ(36) ಮೃತರು. ಕಾಶ್ಮೀರ ಪಂಡಿತ ಸುಮುದಾಯಕ್ಕೆ ಸೇರಿದ ಇವರು ಕುಲ್ಗಾಮ್​ನ ಗೋಪಾಲಪೊರದ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಶಾಲೆಗೆ ಹೋಗುವಾಗ ಗೋಪಾಲಪೊರ ಪ್ರದೇಶದಲ್ಲಿ ಉಗ್ರರು ಶಿಕ್ಷಕಿ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಶಿಕ್ಷಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಮಾರ್ಗಮಧ್ಯೆ ಕೊನೆಯುಸಿರೆಳೆದರು. ರಜನಿ ಅವರು ಕಾಶ್ಮೀರಿ ಪಂಡಿತ ರಾಜ್​ ಕುಮಾರ್​ ಪತ್ನಿ.
#KulgamTerrorIncidentUpdate: Injured lady teacher, a#Hindu& resident of Samba (Jammu division)#succumbedto her injuries.#Terroristsinvolved in this#gruesome#terrorcrime will be soon identified & neutralised.@JmuKmrPolicehttps://t.co/8rZR3dMmLY
— Kashmir Zone Police (@KashmirPolice)May 31, 2022

ಶಿಕ್ಷಕಿಯನ್ನು ಅಮಾನುಷವಾಗಿ ಕೊಂದವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ. ಈ ಕೃತ್ಯದಲ್ಲಿ ಭಾಗಿಯಾದ ಉಗ್ರರನ್ನು ಶೀಘ್ರವೇ ಬಂಧಿಸಿ ಶಿಕ್ಷೆಯಾಗುವಂತೆ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 12ರಂದು ಬುದ್ಗಾಮ್​ ಜಿಲ್ಲೆಯ ಚದೂರದಲ್ಲಿರುವ ಕಚೇರಿಯಲ್ಲಿ ರಾಹುಲ್​ ಭಟ್​ ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.ರಜನಿ ಅವರ ಸಾವಿಗೆ ಸಂತಾಪ ಸೂಚಿಸಿರುವ ನ್ಯಾಷನಲ್​ ಕಾನ್ಫರೆನ್ಸ್​ನ ಉಪಾಧ್ಯಕ್ಷ ಒಮರ್​ ಅಬ್ದುಲ್ಲಾ, ಶಿಕ್ಷಕಿ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಇದೊಂದು ಹೇಯ ಕೃತ್ಯ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್​ ಅಪಘಾತ

ರಾಜ್ಯಕ್ಕೆ ಆಗಮಿಸಿದ ಮುಂಗಾರು: ಜೂನ್‌ನಲ್ಲಿ ಮಳೆ ಕುಂಠಿತ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 7 =
Remember me
