ದೆಹಲಿ:ಕರೊನಾ ಮೊದಲ ಮತ್ತು ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದ್ದು, ಮೂರನೇ ಅಲೆಯ ಆತಂಕದಲ್ಲಿ ದಿನದೂಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಾರಕ ಕಾಯಿಲೆ ಹಕ್ಕಿ ಜ್ವರ ಮತ್ತಷ್ಟು ಭೀತಿ ಹುಟ್ಟಿಸಿದೆ. ಹಕ್ಕಿಜ್ವರಕ್ಕೆ 11 ವರ್ಷದ ಬಾಲಕ ಬಲಿಯಾಗಿದ್ದು, ಇದು ಈ ವರ್ಷ ಭಾರತದಲ್ಲಿ ಮೊದಲ ಸಾವಾಗಿದೆ.
ದೆಹಲಿಯಲ್ಲಿರುವ ಅಖಿಲ ಭಾರತ ವಿಜ್ಞಾನ ಸಂಸ್ಥೆ(ಏಮ್ಸ್​ ಆಸ್ಪತ್ರೆ)ಗೆ ಜು.2ರಂದು ದಾಖಲಾಗಿದ್ದ 11 ವರ್ಷದ ಬಾಲಕನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಬಾಲಕನನ್ನು ಉಳಿಸಿಕೊಳ್ಳಲು ವೈದ್ಯರು ಹರಸಾಹಸ ಪಟ್ಟರಾದರೂ ಫಲಿಸಲಿಲ್ಲ. ಮಂಗಳವಾರ ಆಸ್ಪತ್ರೆಯಲ್ಲೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಮೃತ ಬಾಲಕ ನ್ಯುಮೋನಿಯಾದಿಂದಲೂ ಬಳಲುತ್ತಿದ್ದ. ಆಸ್ಪತ್ರೆಗೆ ದಾಖಲಾದ ಆರಂಭದಲ್ಲಿ ಕರೊನಾ ಟೆಸ್ಟ್ ಮಾಡಲಾಗಿತ್ತು. ವರದಿಯು ನೆಗೆಟಿವ್​ ಬಂದಿತ್ತು.
ಮನುಷ್ಯ, ಪ್ರಾಣಿ-ಪಕ್ಷಿಗಳಿಗೂ ಬಹುಬೇಗ ಹರಡುವ ಹಕ್ಕಿ ಜ್ವರ ಶೇ.60ರಷ್ಟು ಸಾವಿನ ಪ್ರಮಾಣ ಹೊಂದಿದೆ. ಹಾಗಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ.
ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
