ದೆಹಲಿ: ಮಹಾಮಾರಿ ಕರೊನಾ ಸೋಂಕನ್ನು ಕಟ್ಟಿಹಾಕಲು ದೇಶಕ್ಕೆ ಮತ್ತೊಂದು ಸಿಂಗಲ್​ ಡೋಸ್​ ಬಂದಿದೆ. ಸದ್ಯ ಭಾರತದಲ್ಲಿ ಕೋವ್ಯಾಕ್ಸಿನ್​, ಕೋವಿಶೀಲ್ಡ್​, ಸ್ಫುಟ್ನಿಕ್​ ವಿ, ಮೊಡೆರ್ನಾ ಲಸಿಕೆಯನ್ನು ಬಳಸಲಾಗುತ್ತಿದೆ. ಇದೀಗ ಅಮೆರಿಕ ಮೂಲದ ‘ಜಾನ್ಸನ್ ಆ್ಯಂಡ್​ ಜಾನ್ಸನ್’ ಕಂಪನಿಯ ಸಿಂಗಲ್ ಡೋಸ್ ಲಸಿಕೆ ಬಳಸಲು ಕೇಂದ್ರ ಸರ್ಕಾರ ಅಸ್ತು ಎಂದಿದೆ. ಆ ಮೂಲಕ ದೇಶದಲ್ಲಿ ಒಟ್ಟು 5 ಲಸಿಕೆಗಳ ಬಳಕೆಗೆ ಕೇಂದ್ರದಿಂದ ಗ್ರೀನ್​ ಸಿಗ್ನಲ್​ ಸಿಕ್ಕಂತಾಗಿದೆ.
ಈ ಬಗ್ಗೆ ಶನಿವಾರ ಕೇಂದ್ರದ ಆರೋಗ್ಯ ಸಚಿವ ಮನ್​ಸುಖ್​ ಮಾಂಡವೀಯ ಅವರು ಶನಿವಾರ ಅಧಿಕೃತ ಘೋಷಣೆ ಮಾಡಿದ್ದಾರೆ. ‘ಭಾರತದಲ್ಲಿ ಜಾನ್ಸನ್ & ಜಾನ್ಸನ್ ಕಂಪನಿಯ ಏಕ ಡೋಸ್​ ಲಸಿಕೆಯನ್ನು ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 5 ಕರೊನಾ ಲಸಿಕೆ ಬಳಕೆಗೆ ಅನುಮೋದನೆ ಸಿಕ್ಕಿದೆ. 3ನೇ ಅಲೆಯಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕರೊನಾ ಮಣಿಸುವ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ’ ಎಂದು ಟ್ವೀಟ್​ ಮೂಲಕ ಸಚಿವರು ತಿಳಿಸಿದ್ದಾರೆ.
ಜಾನ್ಸನ್ ಆ್ಯಂಡ್​ ಜಾನ್ಸನ್ ಕಂಪನಿಯು ಸಿಂಗಲ್​ ಡೋಸ್​ ಬಳಕೆಗೆ ಅನುಮತಿ ಕೊಡುವಂತೆ ಶುಕ್ರವಾರ ಪ್ರಸ್ತಾವನೆ ಕಳಿಸಿತ್ತು. ಅದೇ ದಿನ ಭಾರತೀಯ ನಿಯಂತ್ರನ ಪ್ರಾಧಿಕಾರವು(ಡಿಸಿಜಿಐ) ಪ್ರಸ್ತಾವನೆಗೆ ಅಸ್ತು ಎಂದಿದೆ.
ಬ್ಲೂಟೂತ್​ ಹೆಡ್​ಫೋನ್​ ಸ್ಫೋಟ: ನವವಿವಾಹಿತ ಸಾವು

ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಮೈಸೂರು ವಿವಿ ಪ್ರಾಧ್ಯಾಪಕ ಕಾಮಪುರಾಣ ಕೇಸ್​ಗೆ ಸ್ಫೋಟಕ ತಿರುವು! ಮರುದಿನವೇ ಉಲ್ಟಾ ಹೊಡೆದ ಸಂತ್ರಸ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
