ಮಂಗಳೂರು:ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಕೇರಳಕ್ಕೆ ತೆರಳಿರುವ ಯುವಕನಿಗೆ ಸೋಂಕು ಖಚಿತವಾಗಿದ್ದು, ಮಂಗಳೂರಿನಲ್ಲೂ ಎಚ್ಚರಿಕೆ ವಹಿಸಲಾಗಿದೆ. 35 ಮಂದಿ ಐಸೋಲೇಶನ್​ಗೆ ಒಳಗಾಗಿದ್ದು, ರಾಜ್ಯದಲ್ಲಿ ಆತಂಕ ಹೆಚ್ಚಿದೆ.
ದುಬೈನಿಂದ ಜುಲೈ 13ರಂದು ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 31 ವರ್ಷದ ಯುವಕನಲ್ಲಿ ರೋಗ ಲಕ್ಷಣ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಕಣ್ಣೂರಿನ ಪರಿಯಾರಂ ಮೆಡಿಕಲ್ ಕಾಲೇಜಿಗೆ ತಪಾಸಣೆಗೆಂದು ಯುವಕ ತೆರಳಿದ್ದ. ಆಗ ಮಂಕಿಪಾಕ್ಸ್​ ಇರುವುದು ಗೊತ್ತಾಗಿದೆ. ವಿಶೇಷ ವಾರ್ಡಿನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನ ಮಾದರಿಯನ್ನು ಪುಣೆ ವೈರಾಲಜಿ ಲ್ಯಾಬ್‌ಗೆ ಕಳುಹಿಸಲಾಗಿದ್ದು, ಪಾಸಿಟಿವ್ ಬಂದಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
35 ಮಂದಿ ಐಸೋಲೇಶನ್:ಯುವಕನೊಂದಿಗೆ ನೇರ ಸಂಪರ್ಕ ಹೊಂದಿದ್ದ 35 ಮಂದಿ ಸೆಲ್ಫ್ ಐಸೋಲೇಶನ್‌ಗೆ ಒಳಗಾಗಿದ್ದಾರೆ. ಇದರಲ್ಲಿ ಯುವಕ ಪ್ರಯಾಣಿಸಿದ ವಿಮಾನದ ಕೆಲವು ಪ್ರಯಾಣಿಕರು, ವಿಮಾನ ನಿಲ್ದಾಣದ ಅಧಿಕಾರಿಗಳು ಸೇರಿದ್ದಾರೆ.
ದುಬೈಯಿಂದ ಆಗಮಿಸಿದ ವಿಮಾನದಲ್ಲಿ ಒಟ್ಟು 191 ಪ್ರಯಾಣಿಕರಿದ್ದರು. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 15, ಉಡುಪಿ ಜಿಲ್ಲೆಯ 6, ಕಾಸರಗೋಡು ಜಿಲ್ಲೆಯ 13, ಕಣ್ಣೂರಿನ 1 ಹಾಗೂ ಮಂಗಳೂರು ವಿಮಾನ ನಿಲ್ದಾಣದ ಇಮ್ಮಿಗ್ರೇಶನ್ ಅಧಿಕಾರಿಯನ್ನು ಪ್ರತ್ಯೇಕವಾಗಿ ಇರುವಂತೆ ಸೂಚನೆ ನೀಡಲಾಗಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ‘ವಿಜಯವಾಣಿ’ಗೆ ತಿಳಿಸಿದ್ದಾರೆ.
10 ವರ್ಷದ ಬಳಿಕ ಬಯಲಾಯ್ತು ಮರ್ಯಾದಾ ಹತ್ಯೆ ಪ್ರಕರಣ: ಬಾರ್​ನಲ್ಲಿ ಕುಳಿತು ಕುಡಿದ ನಶೆಯಲ್ಲಿ ಸತ್ಯ ಕಕ್ಕಿದ ಗಂಡ!

ಮೊಸರು, ಮಜ್ಜಿಗೆ, ಲಸ್ಸಿ ದರ ತಗ್ಗಿಸಲು ಕೆಎಂಎಫ್​ಗೆ ಸಿಎಂ ಸೂಚನೆ

ಬೆಂಗಳೂರಲ್ಲಿ ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ! ಆತಂಕದಲ್ಲಿ ಪೋಷಕರು, ಸಾವಿರಾರು ಮಕ್ಕಳ ಸ್ಥಳಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + thirteen =
Remember me
