ಹೊಸೂರು(ತಮಿಳುನಾಡು):16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ 58 ವರ್ಷದ ಕಾಮುಕನಿಗೆ ಕೃಷ್ಣಗಿರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕೃಷ್ಣಗಿರಿ ಜಿಲ್ಲೆಯ ಮತ್ತೂರು ಸಮೀಪದ ಶಿವಂಪಟ್ಟಿ ಗ್ರಾಮದ ಕೂಲಿ ಕಾರ್ಮಿಕ ಸುಂದರಂ (58) ಶಿಕ್ಷೆಗೆ ಗುರಿಯಾದವ. 2019ರ ಡಿಸೆಂಬರ್​ 9ರಂದು 16 ವರ್ಷದ ಬಾಲಕಿ ಮೇಲೆ ಈತ ಅತ್ಯಾಚಾರ ಎಸಗಿದ್ದ. ವಿಷಯವನ್ನು ಯಾರಿಗಾದರೂ ಹೇಳಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಾಲಕಿ ಈ ವಿಷಯವನ್ನು ಪಾಲಕರಿಗೆ ತಿಳಿಸಿದ್ದಳು. ಇದನ್ನು ಆಧರಿಸಿ ಮತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ಸ್ವೀಕರಿಸಿದ ಪೊಲೀಸರು ಸುಂದರಂನನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸಿ ಕೃಷ್ಣಗಿರಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಲತಾ ಅವರು ಪ್ರಕರಣದಲ್ಲಿ ಸುಂದರಂ ದೋಷಿ ಎಂದು ಘೋಷಿಸಿ, ಜೈಲುಶಿಕ್ಷೆ ಹಾಗೂ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
140 ರೂಪಾಯಿ ದಾಟಿತು 1 ಕೆಜಿ ಟೊಮ್ಯಾಟೊ ಬೆಲೆ!

ನನ್ನ ಗಂಡನನ್ನು ಬೆತ್ತಲೆಗೊಳಿಸಿ ನಾಗಿಣಿ ಡಾನ್ಸ್​ ಮಾಡಿಸಿದ್ರು… ಆ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಪತ್ನಿ

ಜಮೀನು ಖರೀದಿಸಲು ತಂದಿದ್ದ 9.50 ಲಕ್ಷ‌ ರೂ.‌ ಕಳ್ಳತನ: ಹಣ ಕಳೆದುಕೊಂಡ ರೈತನ ಗೋಳಾಟ ಹೇಳತೀರದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − twelve =
Remember me
