ಮುಂಬೈ:ರಿಲಯನ್ಸ್​ ಇಂಡಸ್ಟ್ರಿ ಲಿಮಿಟೆಡ್​ನ ಚೇರ್ಮನ್​ ಹಾಗೂ ವಿಶ್ವದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾದ ಮುಕೇಶ್​ ಅಂಬಾನಿ ಕುಟುಂಬಕ್ಕೆ ಮತ್ತೆ ಬೆದರಿಕೆ ಕರೆ ಬಂದಿದೆ.
ಇಂದು(ಬುಧವಾರ) ಮಧ್ಯಾಹ್ನ 12.57ಕ್ಕೆ ಸರ್ ಎಚ್‌.ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್​ಲೈನ್​ಗೆ ಕರೆ ಮಾಡಿದ ಅಪರಿಚಿತರು ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಅಂಬಾನಿ ಕುಟುಂಬದ ಸದಸ್ಯರಿಗೂ ಜೀವ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಕರೆಯ ಬೆನ್ನು ಹತ್ತಿರುವ ಮುಂಬೈ ಪೊಲೀಸರು, ಆರೋಪಿಗಳ ಪತ್ತೆಗೆ ತೀವ್ರ ಶೋಧ ಮುಂದುವರಿಸಿದ್ದಾರೆ.
A call was received on the landline number of Sir HN Reliance Foundation Hospital at 12.57pm today from an unknown number in which the caller threatened to blow up the Hospital and issued threats in name of some members of the Ambani family: Mumbai Policepic.twitter.com/6LwL14l27A
— ANI (@ANI)October 5, 2022

ಕಳೆದ ಆಗಸ್ಟ್​ನಲ್ಲಿ ಅಂದರೆ, ಸ್ವಾತಂತ್ರ್ಯ ದಿನಾಚರಣೆಯಂದು ಮುಕೇಶ್​ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಮೂರು ಬೆದರಿಕೆ ಕರೆಗಳು ಬಂದಿದ್ದವು. ರಿಲಯನ್ಸ್ ಫೌಂಡೇಶನ್​ನ ಹರ್ಸ್ಕಿಸಂದಾಸ್ ಆಸ್ಪತ್ರೆಯ ದೂರವಾಣಿ ಸಂಖ್ಯೆಗೆ ದುಷ್ಕರ್ಮಿಗಳು ಮೂರು ಬಾರಿ ಕರೆ ಮಾಡಿ ಬೆದರಿಕೆ ಹಾಕಿದ್ದರು.
ಇನ್ನು ಕಳೆದ ವರ್ಷ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸ ‘ಆಂಟಿಲಿಯಾ’ದ ಹೊರಗೆ 20 ಸ್ಫೋಟಕ ಜಿಲೆಟಿನ್ ಸ್ಟಿಕ್‌ಗಳು ಮತ್ತು ಬೆದರಿಕೆ ಪತ್ರವಿರುವ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು.
ಮೈಸೂರು ದಸರಾ: 15 ಸೆಕೆಂಡ್​ನಲ್ಲೇ ಮುಗಿದ ಜಟ್ಟಿ ಕಾಳಗ!

ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್​ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
