ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ನಾಗರಿಕತ್ವ ಪಡೆಯಲು ಅರ್ಹರಾದ ಫಲಾನುಭವಿಗಳನ್ನು ಗುರುತಿಸುವ ಕೆಲಸ ಪ್ರಾರಂಭಿಸಲಾಗಿದ್ದು, ಈಗಾಗಲೇ ಉತ್ತರಪ್ರದೇಶದ 21 ಜಿಲ್ಲೆಗಳಲ್ಲಿ 32 ಸಾವಿರ ಜನರನ್ನು ಪಟ್ಟಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ ಯಾವ ಮಾನದಂಡಗಳ ಮೇಲೆ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕಳೆದ ಜ.10ರಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಕೃತವಾಗಿ ಜಾರಿಗೊಳಿಸಲಾಗಿದೆ. ಆದರೆ ಅಗತ್ಯ ನಿಯಮಗಳನ್ನು ಇನ್ನೂ ರಚಿಸಿಲ್ಲ.
‘ನಾವು ಯೋಜನೆಗೆ ಆತುರ ಪಡುತ್ತಿಲ್ಲ. ಇದೀಗ ಪ್ರಾರಂಭಿಸಿದ್ದೇವೆ. ಕೇಂದ್ರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಬಳಿಕ ನಾವು ಮುಂದುವರಿಯುತ್ತೇವೆ. ಪೌರತ್ವ ಪ್ರಕ್ರಿಯೆ ನಿರಂತವಾಗಿ ನಡೆಯುವಂತದ್ದು. ಹೀಗಾಗಿ ಎಲ್ಲ ಜಿಲ್ಲಾ ನ್ಯಾಯಾಧೀಶರಿಗೆ ಸಮೀಕ್ಷೆಗಳನ್ನು ನಡೆಸಲು ಮತ್ತು ಫಲಾನುಭವಿಗಳ ಅಂಕಿ ಸಂಖ್ಯೆಯ ಪಟ್ಟಿ ನವೀಕರಿಸಲು ಸೂಚಿಸಲಾಗಿದೆ.
ನಾವು ಈ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಲಿದ್ದೇವೆ’ ಎಂದು ಉತ್ತರಪ್ರದೇಶ ಸರ್ಕಾರದ ವಕ್ತಾರ ಹಾಗೂ ಸಚಿವ ಶ್ರೀಕಾಂತ್ ಶರ್ಮಾ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಈವರೆಗೆ ಗುರುತಿಸಲ್ಪಟ್ಟ ಫಲಾನುಭವಿಗಳಲ್ಲಿ ಹೆಚ್ಚಿನವರು ಭಾರತ -ನೇಪಾಳ ಗಡಿಯಲ್ಲಿರುವ ಪಿಲಿಭಿತ್ ಜಿಲ್ಲೆಯವರಾಗಿದ್ದಾರೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಇಲ್ಲಿಗೆ ಬಂದ 37,000 ನಿರಾಶ್ರಿತರನ್ನು ಸಮೀಕ್ಷೆಗಳ ಮೂಲಕ ಗುರುತಿಸಲಾಗಿದ್ದು, ಅವರ ಹೆಸರುಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿ ಕೊಡಲಾಗಿದೆ ಎಂದು ಜಿಲ್ಲೆಯ ಉನ್ನತ ಸರ್ಕಾರಿ ಅಧಿಕಾರಿ ವೈಭವ್ ಶ್ರೀವಾಸ್ತವ್ ಎಂಬುವವರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
