ಆಂಧ್ರಪ್ರದೇಶ:ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದ್ವೆಯಾಗಿದ್ದಕ್ಕೆ ಪ್ರಿಯಕರನ ಮನೆಗೆ ರಾತ್ರೋರಾತ್ರಿ ನುಗ್ಗಿದ ಯುವತಿ ಕುಟುಂಬಸ್ಥರು ದಾಂಧಲೆ ನಡೆಸಿ ಬೆಂಕಿ ಇಟ್ಟು ಗಲಭೆ ಸೃಷ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಕಾರದಪುಡಿ ಎರಚಿ ವಿಕೃತಿ ಮೆರೆದಿದ್ದಾರೆ.
ಇಂತಹ ಘಟನೆ ಕರ್ನೂಲ್ ಜಿಲ್ಲೆಯ ತುಗ್ಗಲಿ ಪಂಚಾಯಿತಿ ವ್ಯಾಪ್ತಿಯ ಪಗಿಡಿರೈ ಗ್ರಾಮದಲ್ಲಿ ಸಂಭವಿಸಿದೆ. ಒಂದೇ ಗ್ರಾಮದ ಯುವತಿ-ಯುವತಿ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿ ಕುಟುಂಬಸ್ಥರ ವಿರೋಧವಿತ್ತು. ಆದರೂ ಪ್ರೇಮಿಗಳಿಬ್ಬರೂ ಮದುವೆ ಮಾಡಿಕೊಂಡು ಗ್ರಾಮದಲ್ಲೇ ವಾಸವಿದ್ದರು.
ಇದೇ ವಿಚಾರಕ್ಕೆ ಕುಪಿತಗೊಂಡ ಯುವತಿ ಕುಟುಂಸ್ಥರು ಮತ್ತು ಅವರ ಕಡೆಯ ಕೆಲವರು ಒಟ್ಟಾಗಿ ಯುವಕನ ಮನೆ ಮೇಲೆ ರಾತ್ರೋರಾತ್ರಿ ದಾಳಿ ಮಾಡಿದ್ದಾರೆ. ಮನೆಗೂ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಮನೆಯಲ್ಲಿದ್ದ ಪರಿಕರಗಳು ಬೆಂಕಿಗಾಹುತಿಯಾಗಿವೆ. ಅಲ್ಲದೆ, 4 ಕಾರುಗಳೂ ಸುಟ್ಟು ಕರಕಲಾಗಿವೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಅವರ ಮೇಲೂ ಕಾರದಪುಡಿ ಎರಚಿ ತಪ್ಪಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
