ಮುಂಬೈ:ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಮಾಣಿಕ್​ರಾವ್​ ಗವಿತ್​ ಅವರು ಶನಿವಾರ ನಿಧನರಾದರು. ಇವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮಹಾರಾಷ್ಟ್ರದ ನಾಸಿಕ್​ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ನಂದೂರ್ಬಾರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮಾಣಿಕ್​ರಾವ್​ ಗವಿತ್​ ಅವರು 9 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2014ರ ಚುನಾವಣೆಯಲ್ಲಿ ಸೋತಿದ್ದರು. ಮಾಣಿಕ್​ರಾವ್​ ಗವಿತ್ ಅವರು 2004ರಲ್ಲಿ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಗೃಹ ರಾಜ್ಯ ಸಚಿವರಾಗಿ ಮತ್ತು 2013ರಲ್ಲಿ ರಾಜ್ಯ ಸಾಮಾಜಿಕ ನ್ಯಾಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಮಾಣಿಕ್​ರಾವ್​ ಗವಿತ್​ ಅವರ ಮಗ ಮತ್ತು ಮಗಳೂ ರಾಜಕೀಯದಲ್ಲಿದ್ದಾರೆ. ಇಗತ್ಪುರಿಯಿಂದ 2009 ಮತ್ತು 2014ರಲ್ಲಿ ಎರಡು ಬಾರಿ ಕಾಂಗ್ರೆಸ್ ಶಾಸಕಿಯಾಗಿ ಪುತ್ರಿ ನಿರ್ಮಲಾ ಗವಿತ್​ ಆಯ್ಕೆಯಾಗಿದ್ದರು. ಶಿವಸೇನೆಗೆ ಸೇರಿದ 2019ರಲ್ಲಿ ಪರಾಭವಗೊಂಡರು. ಇನ್ನು ಗವಿತ್​ರ ಪುತ್ರ ಭರತ್, 2019ರಲ್ಲಿ ಕಾಂಗ್ರೆಸ್​ನಿಂದ ಟಿಕೆಟ್ ಕೊಡಲಿಲ್ಲವೆಂದು ಬೇಸತ್ತು ಬಿಜೆಪಿಗೆ ಸೇರ್ಪಡೆಗೊಂಡರು.
ಚಿಕ್ಕಬಳ್ಳಾಪುರದಲ್ಲಿ ಹೋಟೆಲ್​ನತ್ತ ನುಗ್ಗಿದ ಕ್ಯಾಂಟರ್​: ತಾಯಿ ಗರ್ಭದಲ್ಲಿದ್ದ ಮಗು ಸೇರಿ ಮೂವರ ಸಾವು

ತುಮಕೂರಿನ ಮಹಿಳಾ ಪೇದೆ ಹಾಸನದಲ್ಲಿ ಶವವಾಗಿ ಪತ್ತೆ! ಅಕ್ಕನನ್ನೇ ಕೊಂದು ಲಾಡ್ಜ್​ನಲ್ಲಿ ದುರಂತ ಅಂತ್ಯ ಕಂಡ ತಮ್ಮ

ಹಾವಿನ ಪಕ್ಕದಲ್ಲೇ ಮಲಗಿ ಸಾವು ಗೆದ್ದ ಕಂದ! ಪಾಳುಬಾವಿಗೆ ಹಸುಗೂಸನ್ನು ಎಸೆದಿದ್ದ ಹೆತ್ತಮ್ಮ… ಮಂಡ್ಯದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
